Advertisement
ಹಗರಣದ ಹಣದಲ್ಲಿ ರಾಜ್ಯದ ಕಾಂಗ್ರೆಸ್ ಸಂಸದರಿಂದ ಹೆಂಡ ಖರೀದಿಯಾಗಿದೆ ಎಂದು ಇಡಿ ನಿರ್ದೇಶಕರೊಬ್ಬರಿಂದ ತಿಳಿದು ಬಂದಿದೆ. ಸರಕಾರ ನಿಷ್ಪಕ್ಷ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬಂಟಿಯಾಗಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರ ಪಕ್ಕದಲ್ಲಿ ಕುಳಿತುಕೊಳ್ಳಲು, ಸದನದಲ್ಲಿ ಸಮರ್ಥಿಸಿಕೊಳ್ಳಲು ಯಾವುದೇ ಸಚಿವ-ಶಾಸಕನೂ ಮುಂದೆ ಬರುತ್ತಿಲ್ಲ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
Related Articles
Advertisement
ವಾಲ್ಮೀಕಿ ಹಗರಣ ನಾನು ಮಾಡಿಲ್ಲ, ಅಧಿಕಾರಿಗಳು ಮಾಡಿದ್ದಾರೆ ಎಂದು ಹೇಳುವ ಸಿದ್ದರಾಮಯ್ಯನವರೇ ಹಾಗಾದರೆ ಮುಖ್ಯಮಂತ್ರಿಯಾ ನಿಮ್ಮ ಪಾತ್ರವೇನು? ನೀವು ಅಸಹಾಯಕರಾ? ಅಧಿಕಾರಿಗಳಿಗೆ ಹಗರಣ ಮಾಡಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದರು.
ಸರಕಾರ ಭ್ರಷ್ಟಾಚಾರದಲ್ಲಿ ತೇಲುತ್ತಿದೆ: ರವಿಕುಮಾರ್ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗೇಳುತ್ತಿದೆ ಎಂದು ಬಿಜೆಪಿ ಮುಖಂಡ, ವಿಧಾನಪರಿಷತ್ ಸದಸ್ಯ ರವಿ ಕುಮಾರ್ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮುಡಾದಲ್ಲಿ ಅಕ್ರಮವಾಗಿ ಸೈಟುಗಳನ್ನು ಪತ್ನಿಯ ಹೆಸರಿನಲ್ಲಿ ಪಡೆದಿರುವುದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ 187 ಕೋಟಿ ರೂ. ತೆಲಂಗಾಣಕ್ಕೆ ಕಳುಹಿಸಿ ಲೋಕಸಭಾ ಚುನಾವಣೆ ಮಾಡಿರುವ ಬಗ್ಗೆ ಬಿಜೆಪಿ ನಿರಂತರ ಹೋರಾಟ ಮಾಡಲಿದೆ ಎಂದರು.