Advertisement

Politics: ಚುನಾವಣೆ ಬಳಿಕ ಕಾಂಗ್ರೆಸ್‌ ಸರಕಾರ ಪತನ: ಶೆಟ್ಟರ್‌

11:47 PM Apr 04, 2024 | Team Udayavani |

ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ ಸಹಿತ ಎಲ್ಲ 28 ಸ್ಥಾನಗಳನ್ನು ಗೆಲ್ಲುತ್ತೇವೆ. ಬಳಿಕ ಕಾಂಗ್ರೆಸ್‌ ಸರಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಭವಿಷ್ಯ ನುಡಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರದ ಬಗ್ಗೆ ಹಲವು ಶಾಸಕರಿಗೆ ಆಕ್ರೋಶ ಇದೆ. ಈ ಚುನಾವಣೆ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನಲ್ಲಿ ಕಾಂಗ್ರೆಸ್‌ ಸೋತರೆ ಸಿಎಂ ಸ್ಥಾನ ಕೈ ಬಿಟ್ಟು ಹೋಗುತ್ತದೆ ಎಂಬ ಭಯ ಆವರಿಸಿದೆ. ಹೀಗಾಗಿ ಇದು ಕೊನೆಯ ಚುನಾವಣೆ ಎನ್ನುತ್ತಿದ್ದಾರೆ. ರಾಜ್ಯದ ಜನ ಅವರನ್ನು ನಂಬುವುದಿಲ್ಲ. ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next