Advertisement

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

12:05 AM Apr 28, 2024 | Team Udayavani |

ಬೆಂಗಳೂರು: ಕನ್ನಡಿಗರಿಗೆ ಬರ ಪರಿಹಾರ, ಅಭಿವೃದ್ಧಿಗೆ ಅನುದಾನ ಕೊಡಲು ಖಜಾನೆ ಖಾಲಿ ಮಾಡಿ ಹಣವಿಲ್ಲ ಎಂದು ಕೂತಿರುವ ರಾಜ್ಯ ಕಾಂಗ್ರೆಸ್‌ ಸರಕಾರ, ಕಲೆಕ್ಷನ್‌ ಏಜೆಂಟ್‌ ಸುರ್ಜೇವಾಲಾ ಅವರ ಚುನಾವಣ ಪ್ರಚಾರಕ್ಕೆ ಸುತ್ತಾಡಲು ಸ್ಪೆಷಲ್‌ ಫ್ಲೈಟ್‌ ವ್ಯವಸ್ಥೆ ಮಾಡಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

Advertisement

ರಾಜ್ಯದ ಎಟಿಎಂ ಸರಕಾರ ಕೊಟ್ಟು ಕಳಿಸುವ ಲೂಟಿ ಹಣವನ್ನು ಚುನಾವಣೆಗಾಗಿ ದೇಶದ ತುಂಬಾ ತೆಗೆದುಕೊಂಡು ಹೋಗಿ ಹಂಚುವ ಜವಾಬ್ದಾರಿಯನ್ನುಸುರ್ಜೇವಾಲಾಗೆ ನೀಡಲಾಗಿದೆಯೇ? ಕನ್ನಡಿಗರು ಕುಡಿಯಲು ಹನಿ ನೀರಿಲ್ಲದೆ ಸತ್ತರೂ ಸಿದ್ದರಾಮಯ್ಯ ಸರಕಾರಕ್ಕೆ ಚಿಂತೆ ಇಲ್ಲ. ಆದರೆ, ಹೈಕಮಾಂಡ್‌ ಹೇಳಿದಂತೆ ಕೇಳಿಕೊಂಡು ಕಪ್ಪ ಕಾಣಿಕೆ ಸಲ್ಲಿಸುತ್ತಾ ಅವರ ಸೇವೆ ಮಾಡುತ್ತಾ ಕುರ್ಚಿ ಉಳಿಸಿಕೊಳ್ಳುವುದೇ ಸಿದ್ದರಾಮಯ್ಯ ಅವರ ಗುರಿ ಎಂದು ಎಕ್ಸ್‌ ವೇದಿಕೆಯಲ್ಲಿ ಬಿಜೆಪಿ ಆರೋಪಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next