Advertisement

Cauvery; ಡಿಎಂಕೆ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ನೀರು: ರಾಜೀವ್ ಚಂದ್ರಶೇಖರ್ ಕಿಡಿ

03:43 PM Aug 21, 2023 | |

ಹೊಸದಿಲ್ಲಿ:ಕಾಂಗ್ರೆಸ್ ತನ್ನ ಮಿತ್ರಪಕ್ಷ ಡಿಎಂಕೆ ಒತ್ತಡಕ್ಕೆ ಮಣಿದು ತಮಿಳುನಾಡಿಗೆ ಕಾವೇರಿ ನದಿಯಿಂದ 10 ಟಿಎಂಸಿ ನೀರು ಬಿಟ್ಟಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸೋಮವಾರ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ.

Advertisement

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕರ್ನಾಟಕದ ಹೆಚ್ಚಿನ ಭಾಗಗಳು ಬರಗಾಲಕ್ಕೆ ತುತ್ತಾಗಿದ್ದು, ಕಾಂಗ್ರೆಸ್ ಸರ್ಕಾರವು ಇತರ ಪಕ್ಷಗಳೊಂದಿಗೆ ಸಮಾಲೋಚನೆಯಿಲ್ಲದೆ ನೀರು ಬಿಡುವ ನಿರ್ಧಾರವು ರೈತರ ಸಂಕಷ್ಟಕ್ಕೆ ಕಾರಣವಾಗುತ್ತದೆ. 50 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಯಿಂದ ತಮ್ಮ ಜೀವ ಕಳೆದುಕೊಂಡಿದ್ದಾರೆ. ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಕೃಷಿಗೆ ಹೊಡೆತ ಬಿದ್ದಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದುರಾಡಳಿತ, ಅಭಿವೃದ್ಧಿ ಕೊರತೆ ಮತ್ತು ಭ್ರಷ್ಟಾಚಾರದಿಂದ ಕೂಡಿದೆ ಎಂದರು.

ಲಡಾಖ್‌ನಲ್ಲಿ ಚೀನಾ ಭಾರತದ ಭೂಪ್ರದೇಶವನ್ನು ಅತಿಕ್ರಮಿಸಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಚಂದ್ರಶೇಖರ್, ಅವರು “ಬೂಟಾಟಿಕೆಯ ಐಕಾನ್”. ಭಾರತದ ಇತಿಹಾಸದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಸಮಗ್ರತೆಯ ವಿಷಯದಲ್ಲಿ ಅಚಲವಾದ ಕಠಿಣ ನಿರ್ಧಾರ ಕೈಗೊಂಡ ಸರ್ಕಾರವಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next