Advertisement

Congress Govt.,: ಕಾಮಗಾರಿಯಲ್ಲಿ ಮುಸ್ಲಿಂ ಮೀಸಲು: ಬಿಜೆಪಿ

10:18 PM Nov 12, 2024 | Team Udayavani |

ಬೆಂಗಳೂರು: ಒಂದು ಕೋಟಿ ರೂ. ವರೆಗಿನ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲು ನೀಡುವ ಪ್ರಸ್ತಾವದ ಗೊಂದಲ ಸೃಷ್ಟಿಯಾಗುತ್ತಿದ್ದಂತೆ ಸರಕಾರ ಸ್ಪಷ್ಟನೆ ನೀಡಿದರೂ ವಿಪಕ್ಷಗಳು ಕಾಂಗ್ರೆಸ್‌ ವಿರುದ್ಧ ತಿರುಗಿಬಿದ್ದಿವೆ.

Advertisement

ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ವಿಪಕ್ಷ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮೀಸಲಾತಿ ಲೆಕ್ಕಾಚಾರವನ್ನೂ ಮುಂದಿಟ್ಟಿದ್ದಾರೆ.

ಚಾಮುಂಡೇಶ್ವರಿ ಕ್ಷಮಿಸುತ್ತಾಳಾ?
ಎಡವಟ್ಟು ಮಾಡುವುದು ಆಮೇಲೆ ಸುಳ್ಳು ಹೇಳುವುದು ಸಿದ್ದರಾಮಯ್ಯ ದಿನಚರಿ. ಸ್ವಾಮಿ ಮುಖ್ಯಮಂತ್ರಿಗಳೇ, ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಪ್ರಸ್ತಾವನೆಯೇ ಸರಕಾರದ ಮುಂದಿಲ್ಲ ಎಂದು ಸತ್ಯದ ತಲೆಯ ಮೇಲೆ ಹೊಡೆದ ಹಾಗೆ ಸುಳ್ಳು ಹೇಳುತ್ತೀರಲ್ಲಾ , ಆ ತಾಯಿ ಚಾಮುಂಡೇಶ್ವರಿ ಮೆಚ್ಚುತ್ತಾಳಾ? ತಮ್ಮನ್ನು ನಂಬಿ ಮತ ಹಾಕಿ ಅಧಿಕಾರ ಕೊಟ್ಟ ಕನ್ನಡಿಗರು ಕ್ಷಮಿಸುತ್ತಾರಾ? ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ಕೊಡಬೇಕು ಎಂದು ತಮ್ಮ ರಾಜಕೀಯ ಕಾರ್ಯದರ್ಶಿ ನಜೀರ್‌ ಅಹ್ಮದ್‌, ಸಚಿವ ಜಮೀರ್‌ ಅಹ್ಮದ್‌ ಖಾನ್‌ ಸೇರಿದಂತೆ ಮುಸ್ಲಿಂ ಶಾಸಕರು ಆಗ ಸ್ಟ್‌ 24ರಂದು ತಮಗೆ ಪತ್ರ ಬರೆಯುತ್ತಾರೆ. ತಾವು ಅಂದೇ ಪತ್ರವನ್ನು ಪರಿಶೀಲಿಸಿ ಮಂಡಿಸಿ ಎಂದು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿದ್ದೀರಿ. ಈ ಸಂಬಂಧ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತರಲೂ ಸಹ ತಾವು ಅನುಮೋದನೆ ನೀಡಿದ್ದೀರಿ ಎಂದು ದೂರಿದ್ದಾರೆ. ಅಲ್ಲದೆ ಮುಸ್ಲಿಮರಿಗೆ ಶೇ.4ರಷ್ಟು ಗುತ್ತಿಗೆಯಲ್ಲಿ ಮೀಸಲು ಒದಗಿಸಿದರೆ ಈ ಪ್ರಮಾಣ ಒಟ್ಟಾರೆ ಶೇ. 47ಕ್ಕೆ ಏರಿಕೆಯಾಗುತ್ತದೆ ಎಂದಿದ್ದಾರೆ.

ಸರಕಾರ ವಕ್ಫ್ ವಿವಾದದ ಅನಂತರ ಗುತ್ತಿಗೆಯಲ್ಲೂ ಮೀಸಲಾತಿ ನೀಡಲು ಹೊರಟಿರುವುದು ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ನಡೆಯಾಗಿದೆ. ಕಾಂಗ್ರೆಸ್‌ ಸರಕಾರದ ಇಂತಹ ನಿಲುವುಗಳನ್ನು ನಿರಂತರ ಪ್ರತಿಭಟಿಸುವುದು ಅನಿವಾರ್ಯವಾಗಿದೆ.
– ಬಿ.ವೈ. ವಿಜಯೇಂದ್ರ,
ಬಿಜೆಪಿ ರಾಜ್ಯಾಧ್ಯಕ್ಷ

Advertisement

ಕಾಮಗಾರಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ನೀವು ಕೊಟ್ಟ ಸ್ಪಷ್ಟನೆಯೇ ಶಂಕಿತ ಭಯೋತ್ಪಾದಕ ಚಟುವಟಿಕೆಯ ರೀತಿ ಇದೆ. ಇಂದು ಬೇಡಿಕೆ, ನಾಳೆ ಚಿಂತನೆ, ನಾಡಿದ್ದು ಪ್ರಸ್ತಾವ, ಆಮೇಲೆ ಆದೇಶ, ಬಳಿಕ ಸದ್ದಿಲ್ಲದೇ ಜಾರಿ!
– ವಿ. ಸುನಿಲ್‌ ಕುಮಾರ್‌,
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

 

Advertisement

Udayavani is now on Telegram. Click here to join our channel and stay updated with the latest news.

Next