ಬೆಂಗಳೂರು : ಕಾಂಗ್ರೆಸ್ ಗ್ಯಾರಂಟಿ ಘೋಷಣೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಫ್ & ಟಫ್ ಆಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.
ಸುದ್ದಿಗೋಷ್ಠಿಯ ವೇಳೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕುರಿತು ಪತ್ರಕರ್ತರೊಬ್ಬರು ಈ ಯೋಜನೆ ದುಡಿಯುವ ವರ್ಗ, ಸರ್ಕಾರಿ ಉದ್ಯೋಗಿ ಮಹಿಳೆಯರಿಗೆ ಸಿಗುತ್ತದೆಯಾ ಎಂದು ಪ್ರಶ್ನಿಸಿದರು. ಉತ್ತರಿಸಿದ ಸಿಎಂ, ”ಎಲ್ಲರಿಗೂ ಸಿಗುತ್ತದೆ, ನನ್ನ ಹೆಂಡತಿಗೂ ಸಿಗುತ್ತದೆ” ಎಂದು ಉತ್ತರಿಸಿದರು. ಈ ವೇಳೆ ಉಪಸ್ಥಿತರಿದ್ದ ಸಚಿವರೆಲ್ಲರೂ ಗೊಳ್ಳನೇ ನಕ್ಕು ನಗೆ ಗಡಲಲ್ಲಿ ತೇಲಾಡಿದರು.
ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ, ವಿದ್ಯಾರ್ಥಿನಿಯರನ್ನೊಳಗೊಂಡಂತೆ ಬಸ್ ನಲ್ಲಿ ಉಚಿತ ಪ್ರಯಾಣ ಜೂನ್ 11 ರಿಂದ ಜಾರಿ ಮಾಡುತ್ತೇವೆ. ಕರ್ನಾಟಕದೊಳಗೆ ಪ್ರಯಾಣಿಸಲು ಅನ್ವಯ. ರಾಜ್ಯದ ಒಳಗಡೆ ಎಸಿ, ರಾಜಹಂಸ ಬಸ್ ಹೊರತುಪಡಿಸಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ನಲ್ಲೂ ಫ್ರೀ ಆಗಿ ಪ್ರಯಾಣ ಮಾಡಬಹುದು. ಬೆಂಗಳೂರಿನಿಂದ ತಿರುಪತಿಯಾಗಲಿ, ಹೊರ ರಾಜ್ಯಕ್ಕಾಗಲಿ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದರು. ಕೆಎಸ್ ಆರ್ ಟಿಸಿ ಯಲ್ಲಿ ಪುರುಷರಿಗೆ 50% ಮೀಸಲಿಡುತ್ತೇವೆ, ಇದು ಬಿಎಂಟಿಸಿ ಬಸ್ ನಲ್ಲಿ ಅನ್ವಯವಾಗುವುದಿಲ್ಲ ಎಂದರು.