Advertisement

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ

06:20 PM Oct 31, 2024 | Team Udayavani |

ಬೆಂಗಳೂರು: ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಐದು ಗ್ಯಾರಂಟಿಗಳ ತೆಗೆದು ಹಾಕಲು ವೇದಿಕೆ ಸಿದ್ಧಪಡಿಸುತ್ತಿದೆ ಎಂಬ ಸಂದೇಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರಿದ್ದಾರೆ. ಅದಕ್ಕಾಗಿ ಕಾಂಗ್ರೆಸ್‌ ಸರ್ಕಾರವು ಹಂತ ಹಂತವಾಗಿ ನಿಲ್ಲಿಸಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಗುರುವಾರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಉಚಿತ ಪ್ರಯಾಣ ಶಕ್ತಿ ಯೋಜನೆ ಬಗ್ಗೆ ಅನೇಕ ಮಹಿಳೆಯರು ತಮ್ಮೊಂದಿಗೆ ಮಾತನಾಡಿದ್ದಾರೆ ಮತ್ತು ಟಿಕೆಟ್ ಖರೀದಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳ ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಯಾರಾದರೂ ಹೇಳಲು ಸಾಧ್ಯವೇ?;  ಬಿಪಿಎಲ್‌ ಕಾರ್ಡ್‌ ರದ್ದು:
“ತಮಗೆ ಯಾವುದೇ ಹಣಕಾಸಿನ ಸಮಸ್ಯೆಗಳಿಲ್ಲ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನಿಲ್ಲಿಸಬೇಕು ಎಂದು ಯಾರಾದರೂ ಹೇಳಲು ಸಾಧ್ಯವೇ?” ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಗೆ ಅವರು ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಪ್ರತಿ ತಾಲೂಕಿನಲ್ಲಿ 3,000ದಿಂದ 4,000 ಬಿಪಿಎಲ್ ಕಾರ್ಡ್‌ಗಳ ರದ್ದುಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ 20 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ. ಇದು ಒಂದರ ಹಿಂದೆ ಒಂದರಂತೆ ಖಾತರಿ ಯೋಜನೆಗಳನ್ನು ಹಿಂಪಡೆಯುವ ಸೂಚನೆಯೇ ಹೊರತು ಬೇರೇನೂ ಅಲ್ಲ’ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಆರ್ಥಿಕತೆ ಕುಸಿತ: 

ಶೀಘ್ರದಲ್ಲೇ ಅವರ ನಿಜವಾದ ಬಣ್ಣ ಬಯಲಾಗಲಿದೆ. ಕರ್ನಾಟಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯವಾಗಿದೆ. ಆದರೆ ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯಿಂದಾಗಿ ಆರ್ಥಿಕತೆ ಕುಸಿದಿದೆ. ರಾಜ್ಯದ ಜನರು ಎಂದಿಗೂ ಕರ್ನಾಟಕದ ಖಜಾನೆಯನ್ನು ಖಾಲಿ ಮಾಡಿಲ್ಲ. ಆದರೆ ಈಗಿನ ಸರ್ಕಾರ ಬೇರೆ ಬೇರೆ ಉದ್ದೇಶಗಳಿಗೆ ಹಣ ಲಪಟಾಯಿಸುತ್ತಿದ್ದು, ಇದರಿಂದ ರಾಜ್ಯ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next