Advertisement
ನ. 20ರಂದು ಚುನಾವಣೆ ಎದುರಿಸಲಿರುವ ಮಹಾರಾಷ್ಟ್ರದ ಮುಂಬಯಿಯಲ್ಲಿ ಶನಿವಾರ ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದ ನಾಯಕರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಹಾಗೂ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿದ್ದರು.
Related Articles
Advertisement
ಗ್ಯಾರಂಟಿ ವಿಚಾರವಾಗಿ ಸುಳ್ಳು ಹಬ್ಬಿಸಿದ ಪಕ್ಷಗಳ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುವ ಕುರಿತು ನಾವು ಯೋಚನೆ ಮಾಡುತ್ತಿದ್ದೇವೆ ಎಂದೂ ಡಿಕೆಶಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರಿಂದ ತೊಡಗಿ ಬಿಜೆಪಿಯ ಎಲ್ಲ ನಾಯಕರು ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡುತ್ತಿದ್ದರು. ಆದರೆ ಈಗ ಅವರೇ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಭರವಸೆ ಕೊಟ್ಟಿ¨ªಾರೆ. ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಹೆಮ್ಮೆ ಎಂದಿದ್ದಾರೆ.
50 ಸಾವಿರ ಉದ್ಯೋಗ ಸೃಷ್ಟಿ
ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾತನಾಡಿ, ನಾವು ಗ್ಯಾರಂಟಿ ಯೋಜನೆಯನ್ನು ವ್ಯವಸ್ಥಿತವಾಗಿ ಜಾರಿ ಮಾಡುತ್ತ ಬರುತ್ತಿದ್ದೇವೆ. ತೆಲಂಗಾಣದಲ್ಲಿ ನಾವು ಅಧಿಕಾರಕ್ಕೆ ಬಂದೊಡನೆ 22.22 ಲಕ್ಷ ರೈತರ 17,869 ಕೋಟಿ ರೂ. ಸಾಲವನ್ನು ಮನ್ನಾ ಮಾಡಿದ್ದೇವೆ. 10 ತಿಂಗಳುಗಳಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಿದ್ದೇವೆ. 200 ಯೂನಿಟ್‌ವರೆಗಿನ ಉಚಿತ ವಿದ್ಯುತ್ ಯೋಜನೆಯಿಂದ 50 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿದೆ. ಆದರೆ ಬಿಜೆಪಿಗೆ ಇಂಥ ಯಾವ ಯಶೋಗಾಥೆಯೂ ಇಲ್ಲ ಎಂದು ಕಿಡಿಕಾರಿದರು.
ಹಳೆ ಪಿಂಚಣಿ ಯೋಜನೆ ಜಾರಿ
ಹಿಮಾಚಲ ಪ್ರದೇಶ ಸಿಎಂ ಸುಖು ಅವರು ತಮ್ಮ ಸರಕಾರದ ಯೋಜನೆಗಳ ಬಗ್ಗೆ ಮಾತನಾಡಿ, ಹಳೆಯ ಪಿಂಚಣಿ ಜಾರಿ ಮಾಡುವ ನಮ್ಮ ನಿರ್ಧಾರದಿಂದ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಹೊಸ ಪಿಂಚಣಿ ಯೋಜನೆಯಿಂದ ಮಾಸಿಕ 5 ಸಾವಿರ ರೂ. ಪಡೆಯುತ್ತಿದ್ದವರು ಈಗ ಹಳೆಯ ಪಿಂಚಣಿ ಯೋಜನೆಯನ್ವಯ 50 ಸಾವಿರ ರೂ. ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಒಟ್ಟಾಗಿದ್ದರೆ ನಾವು ಸುರಕ್ಷಿತ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಸಂಸ್ಕೃತಿಯೇ ಒಟ್ಟಾಗಿರುವುದು. ಆದರೆ ಇಂಥ ಹೇಳಿಕೆ ನೀಡುವವರು ದೇಶವನ್ನು ಒಟ್ಟಾಗಿಡಲು ಬಿಡುವುದಿಲ್ಲ ಎಂದಿದ್ದಾರೆ.
-ಡಿ.ಕೆ. ಶಿವಕುಮಾರ್, ಕರ್ನಾಟಕ ಡಿಸಿಎಂ
ತೆಲಂಗಾಣದಲ್ಲಿ ನಾವು ರೈತರ 17,869 ಕೋಟಿ ರೂ. ಸಾಲ ಮನ್ನಾ ಮಾಡಿದ್ದೇವೆ. 10 ತಿಂಗಳಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಿದ್ದೇವೆ. ಉಚಿತ ವಿದ್ಯುತ್ ಯೋಜನೆಯಿಂದ 50 ಲಕ್ಷ ಕುಟುಂಬಗಳಿಗೆ ಅನುಕೂಲಆಗಿದೆ. ಬಿಜೆಪಿಗೆ ಇಂಥ ಯಾವ ಯಶೋಗಾಥೆಯೂ ಇಲ್ಲ.
-ರೇವಂತ್ ರೆಡ್ಡಿ, ತೆಲಂಗಾಣ ಸಿಎಂ
ನಮ್ಮ ಸರಕಾರ ಹಳೆ ಪಿಂಚಣಿ ಯೋಜನೆ ಮರುಜಾರಿ ಮಾಡಿದೆ. ಹೊಸ ಪಿಂಚಣಿ ಯೋಜನೆಯಿಂದ ಮಾಸಿಕ 5 ಸಾವಿರ ರೂ. ಪಡೆಯುತ್ತಿದ್ದವರು ಈಗ ಹಳೆಯ ಪಿಂಚಣಿ ಯೋಜನೆಯನ್ವಯ 50 ಸಾವಿರ ರೂ. ಪಡೆಯುತ್ತಿದ್ದಾರೆ.
-ಸುಖ್ವಿಂದರ್ ಸಿಂಗ್ ಸುಖು, ಹಿಮಾಚಲ ಮುಖ್ಯಮಂತ್ರಿ