Advertisement

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

10:51 PM May 15, 2024 | Team Udayavani |

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಕೈವಾಡವಿದ್ದು, ಬಿಜೆಪಿ ಮೇಲೆ ಹೊರಿಸುವ ಪ್ರಯತ್ನವನ್ನು ಆ ಪಕ್ಷದ ಹಿರಿಯ ನಾಯಕರು ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಸಂತ್ರಸ್ತೆ ಕಿಡ್ನಾಪ್‌ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಕೂಡಲೇ ಬಂಧಿಸಿದರು. ಆದರೆ, ಪ್ರಜ್ವಲ್‌ ಮಾಜಿ ಕಾರು ಚಾಲಕನನ್ನು ಮಾತ್ರ ಇದುವರೆಗೂ ಬಂಧಿಸಿಲ್ಲ. ಎಸ್‌ಐಟಿ ಅಧಿಕಾರಿಗಳು ಪಕ್ಷಪಾತ ಧೋರಣೆಯಿಂದ ಕೆಲಸ ಮಾಡುತ್ತಿದ್ದಾರೆ. ಎಚ್‌.ಡಿ. ಕುಮಾರಸ್ವಾಮಿ ಹೇಳಿದಂತೆ ಇಲ್ಲಿ ತಿಮಿಂಗಿಲವೇ ಇದೆ. ಅದನ್ನು ಬಡಿದು ತಿನ್ನಬೇಕಾ, ಬೇಡವಾ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬ ತೀರ್ಮಾನಿಸಲಿದೆ ಎಂದರು.

ತನಿಖೆಯ ಪ್ರತೀ ಮಾಹಿತಿ ಮೊದಲು ಕಾಂಗ್ರೆಸ್‌ ನಾಯಕರಿಗೆ ತಲುಪುತ್ತಿದೆ. ಎಸ್‌ಐಟಿ ಅಧಿಕಾರಿಗಳು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಿರುವುದರಿಂದ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಅನಂತರ ಯಾರೆಲ್ಲ ಬಂಧನಕ್ಕೊಳಗಾಗುತ್ತಾರೆ ಎಂಬುದನ್ನು ನೋಡಲಿ ಎಂದರು.

ಪ್ರಜ್ವಲ್‌ ಮಾಜಿ ಕಾರು ಚಾಲಕ ಎಲ್ಲೋ ನಿಂತು ಸಂದೇಶ ಕಳುಹಿಸುತ್ತಿದ್ದಾನೆ. ಕಾಂಗ್ರೆಸ್‌ನವರೇ ಚಾಲಕನನ್ನು ಬಚ್ಚಿಟ್ಟಿದ್ದಾರೆ. ಹಾಸನದಲ್ಲಿ ಎಲ್ಲ ಕಡೆ ಪೆನ್‌ಡ್ರೈವ್‌ ಹಂಚಲಾಗಿದೆ ಎಂದ ಮೇಲೆ ಅದು ಬಿಜೆಪಿ ಕಾರ್ಯಕರ್ತರಿಗೆ ತಲುಪಿರಬಹುದು. ಅದೇ ರೀತಿ ಕಾಂಗ್ರೆಸ್‌ ಕಾರ್ಯಕರ್ತರ ಬಳಿಯೂ ವೀಡಿಯೋ ಇದೆ. ಹಾಗಾದರೆ ಕಾಂಗ್ರೆಸ್‌ ಕಾರ್ಯಕರ್ತರನ್ನೂ ಬಂಧಿಸಬೇಕಲ್ಲವೇ? ಎಂದು ಪ್ರಶ್ನಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next