ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಜೆಡಿಎಸ್-ಕಾಂಗ್ರೆಸ್ ಸಮಿಶ್ರ ಅಧಿಕಾರ ಅವಧಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಹೇಳಿಕೆ ನೀಡಿದ್ದರು.ಆಗ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧ ಶಾಮೀಲಾದ ಆರೋಪ ಹೊತ್ತ ಕಾಂಗ್ರೆಸ್ ಶಾಸಕರಾದ ಹ್ಯಾರಿಸ್ ಮತ್ತು ಲಮಾಣಿ ಅವರ ಮಕ್ಕಳನ್ನು ಬಂಧಿಸಲು ಸಿದ್ದರಾಮಯ್ಯ ಒತ್ತಾಯಿಸುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.
ಪ್ರಕರಣದ ಸತ್ಯಾಸತ್ಯತೆ ಹೊರಬೀಳಬೇಕೆಂದು ಕಳಕಳಿ ಇದ್ದರೆ ಸಿದ್ದರಾಮಯ್ಯಅವರು ಶ್ರೀಕಿ ಹೇಳಿದ ಕಾಂಗ್ರೆಸ್ ಶಾಸಕರ ಮಕ್ಕಳ ಬಂಧನಕ್ಕೆ ಒತ್ತಾಯಿಸುತ್ತಿದ್ದರು. ಆದರೆ ಸದ್ಯದ ಸ್ಥಿತಿ ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತು ಎಂಬಂತಾಗಿದೆ ಎಂದು ಟೀಕಿಸಿದರು.
ಇದನ್ನೂ ಓದಿ:ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
ಕೈ ಮುಖಂಡರು ಸಾಕ್ಷ್ಯಾಧಾರ ನಾಶ ಹಾಗೂ ಪ್ರಕರಣ ತನಿಖೆ ಹಾದಿ ತಪ್ಪಿಸುವಲ್ಲಿ ಎತ್ತಿದ ಕೈ.ಈ ಹಿಂದೆ ಡಿ.ಕೆ.ರವಿ ಸಾವಿನ ಪ್ರಕರಣದಲ್ಲೂ ಹೀಗೆ ಆಗಿದೆ. ತನ್ನ ಬಟ್ಟಲಲ್ಲಿ ಹೆಗ್ಗಣ ಬಿದ್ದರೂ ಬೇರೆಯವರು ಗ್ಲಾಸಿನಲ್ಲಿ ನೊಣ ಬಿದ್ದಿದೆ ಎಂದು ಹೇಳಿ ಜಾರಿಕೊಳ್ಳುವ ಜಾಯಮಾನ ಕಾಂಗ್ರೆಸ್ ನಾಯಕರದ್ದಾಗಿದೆ ಎಂದರು.