Advertisement

ಬಿಎಸ್‌ವೈ ವಿರುದ್ಧ  ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

10:44 AM Mar 26, 2017 | Team Udayavani |

ಬೆಂಗಳೂರು: ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಮತದಾರರಿಗೆ ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಅನಿಲ್‌ ಕುಮಾರ್‌ ಝಾ ಅವರಿಗೆ ಕಾಂಗ್ರೆಸ್‌ ವಕ್ತಾರರಾದ ವಿ.ಎಸ್‌. ಉಗ್ರಪ್ಪ ಹಾಗೂ ಎಚ್‌.ಎಂ. ರೇವಣ್ಣ ದೂರು ನೀಡಿದ್ದಾರೆ. ಯಡಿಯೂರಪ್ಪ ಗುಂಡ್ಲುಪೇಟೆ ತಾಲೂಕಿನ ಭೀನಮಬೀಡು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನ್‌ ಕುಮಾರ್‌ ಪರವಾಗಿ ಮತಯಾಚಿಸುವ ಸಂದರ್ಭದಲ್ಲಿ ತಾವು ಆಡಿದ ಮಾತು ತಪ್ಪಲ್ಲ, ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇವೆಂದು ಜನರಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.

Advertisement

ಅಲ್ಲದೇ ಗುಂಡ್ಲುಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಗಳಿಸಿದರೆ, ಕ್ಷೇತ್ರವನ್ನು ದತ್ತು ಪಡೆಯುವುದಾಗಿ ಪ್ರಮಾಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂ ಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಬಿಜೆಪಿಯವರು ಎರಡೂ ಕ್ಷೇತ್ರಗಳಲ್ಲಿ ಸೋಲುವ ಭೀತಿಯಿಂದ ಜನರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ನಡೆಸಿದ್ದಾರೆ. ಚುನಾವಣಾ ಆಯೋಗ ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್‌ ಸ್ಪರ್ಧೆಯನ್ನು ಅಸಿಂಧುಗೊಳಿಸಬೇಕೆಂದು ಉಗ್ರಪ್ಪ ಇದೇ ಸಂದರ್ಭದಲ್ಲಿ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next