Advertisement

ಮಹಾದಾಯಿ ಯೋಜನೆ ಅನುಷ್ಠಾನಕ್ಕಾಗಿ ಟ್ರಾಕ್ಟರ್ ರ್ಯಾಲಿ ಮಾಡಲು ಕಾಂಗ್ರೆಸ್ ತೀರ್ಮಾನ

04:41 PM Mar 28, 2022 | Team Udayavani |

ಬೆಂಗಳೂರು: ಮೇಕೆದಾಟು ಪಾದಯಾತ್ರೆ ನಂತರ ಕಾಂಗ್ರೆಸ್ ನಿಂದ ಮತ್ತೊಂದು ದೊಡ್ಡ ಮಟ್ಟದ ಪ್ರತಿಭಟನೆಗೆ ಸಿದ್ದತೆ ನಡೆಸಲಾಗುತ್ತಿದೆ. ಮಹಾದಾಯಿ ಯೋಜನೆ ಅನುಷ್ಠಾನಕ್ಕಾಗಿ ಮೇ ತಿಂಗಳಿನಲ್ಲಿ ಉತ್ತರ ಕರ್ನಾಟಕದಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.

Advertisement

ಮಹಾದಾಯಿ ಹೋರಾಟಕ್ಕಾಗಿ ಮಾಜಿ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು ಮುಖಂಡರ ಸಭೆ ನಡೆಯಿತು.

ಬಳಿಕ ಮಾತನಾಡಿದ ಹಿರಿಯ ನಾಯಕ ಹೆಚ್.ಕೆ ಪಾಟೀಲ್, ಮಹಾದಾಯಿ ಯೋಜನೆ ಅನುಷ್ಠಾನಕ್ಕಾಗಿ ಹೋರಾಟ ಮಾಡಲು ನಿರ್ಧಾರ ಮಾಡಿದ್ದೇವೆ. ಉತ್ತರ ಕರ್ನಾಟಕ ಭಾಗದ ಜನರ ಉಸಿರು ಮಹಾದಾಯಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ಪಕ್ಷ ಇನ್ನಷ್ಟು ಬಲಿಷ್ಠವಾಗಲಿ ಎಂಬುದು ನನ್ನ ಹಾರೈಕೆ…ಗಡ್ಕರಿ ಕೊಟ್ಟ ಸಲಹೆ ಏನು?

ಮಹಾದಾಯಿ ಅನುಷ್ಠಾನಕ್ಕಾಗಿ ಪಾದಯಾತ್ರೆ ಮಾಡಬೇಕೋ, ಟ್ರ್ಯಾಕ್ಟರ್ ರ್ಯಾಲಿ ಮಾಡಬೇಕೋ ಗೊತ್ತಿಲ್ಲ. ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳು ಟ್ರ್ಯಾಕ್ಟರ್ ರ್ಯಾಲಿಗೆ ಸಲಹೆ ಕೊಟ್ಟಿದ್ದಾರೆ. ಹೀಗಾಗಿ ಮಹಾದಾಯಿ ಅನುಷ್ಠಾನಕ್ಕಾಗಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತೇವೆ. ಮೇ ಮೊದಲ ವಾರ ಅಥವಾ ಎರಡನೇ ವಾರದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತೇವೆ. ಸರಿಯಾದ ದಿನಾಂಕ ನಿಗದಿ ಮಾಡುತ್ತೇವೆ. ಆರರಿಂದ ಎಂಟು ದಿನ ಟ್ರ್ಯಾಕ್ಟರ್ ರ್ಯಾಲಿ ಇರುತ್ತದೆ ಎಂದು ಅವರು ಹೇಳಿದರು.

Advertisement

ಎಚ್ ಕೆ ಪಾಟೀಲ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿ, ಶ್ರೀನಿವಾಸ್ ಮಾನೆ, ಪ್ರಸಾದ್ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಎಂಎಲ್‌ಸಿ ಅರ್ ಬಿ ತಿಮ್ಮಾಪುರ್ ಮುಂತಾದ ಪ್ರಮುಖರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next