Advertisement
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಹಣಕಾಸಿನ ನಿರ್ವಹಣೆಯಲ್ಲಿ ವಿಫಲವಾಗಿದೆ. 2022-23ರಲ್ಲಿ 5.05 ಲಕ್ಷ ಕೋಟಿ ರೂ. ಇದ್ದ ರಾಜ್ಯದ ಸಾಲದ ಪ್ರಮಾಣ 2024-25ರಲ್ಲಿ 6.57 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಶಾಸಕರಿಗೆ ಪ್ರದೇ ಶಾಭಿವೃದ್ಧಿ ಅನುದಾನ ಸರಿಯಾಗಿ ಬಾರದ ಕಾರಣ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದರು.
Related Articles
Advertisement
ಎನ್‌ಡಿಎ ಒಕ್ಕೂಟಕ್ಕೆ ಗೆಲುವು: ಗುರ್ಮೆಕಾಪು: ವಿಧಾನಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಪಕ್ಷದ ಕಾಪು ಮಂಡಲ ಕಚೇರಿ ಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರ ಉಪಸ್ಥಿತಿ ಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಾತ್ಯತೀತ ಜನತಾ ದಳ (ಜೆಡಿಎಸ್) ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಉಡುಪಿ – ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಸಹಿತ ಪ್ರಮುಖ ನಾಯಕರು ಉಪಸ್ಥಿತರಿದ್ದರು.