Advertisement

ರಾಜ್ಯದ ಜನರ ಮೇಲೆ ಸಾಲದ ಹೊರೆ ಹೆಚ್ಚಿಸಿದ ಕಾಂಗ್ರೆಸ್‌: ಬಿಜೆಪಿ

12:04 AM Jun 02, 2024 | Team Udayavani |

ಉಡುಪಿ: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿ ಆರ್ಥಿಕವಾಗಿ ದಿವಾಳಿ ಮಾಡಿರುವುದು ಮತ್ತು ಭ್ರಷ್ಟಾಚಾರವೇ ಕಾಂಗ್ರೆಸ್‌ ಸರಕಾರದ ಒಂದು ವರ್ಷದ ಸಾಧನೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ಟೀಕಿಸಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್‌ ಹಣಕಾಸಿನ ನಿರ್ವಹಣೆಯಲ್ಲಿ ವಿಫ‌ಲವಾಗಿದೆ. 2022-23ರಲ್ಲಿ 5.05 ಲಕ್ಷ ಕೋಟಿ ರೂ. ಇದ್ದ ರಾಜ್ಯದ ಸಾಲದ ಪ್ರಮಾಣ 2024-25ರಲ್ಲಿ 6.57 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಶಾಸಕರಿಗೆ ಪ್ರದೇ ಶಾಭಿವೃದ್ಧಿ ಅನುದಾನ ಸರಿಯಾಗಿ ಬಾರದ ಕಾರಣ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದರು.

ವಾಲ್ಮೀಕಿ ನಿಗಮದ ಅಧಿಕಾರಿಯ ಆತ್ಮಹತ್ಯೆಯ ಹಿಂದೆ ಸಚಿವರ ಕೈವಾಡವಿದೆ. ಮುಖ್ಯಮಂತ್ರಿ ಸಿದ್ದರಾ ಮಯ್ಯ ತತ್‌ಕ್ಷಣವೇ ಸಚಿವರ ರಾಜೀನಾಮೆ ಪಡೆಯಬೇಕು. ಹಣ ವರ್ಗಾವಣೆಯೇ ಈ ಸರಕಾರದ ಸಾಧನೆಯಾಗಿದೆ ಎಂದರು.

ರಾಜ್ಯ ಸರಕಾರ ಬಿತ್ತನೆ ಬೀಜದ ದರವನ್ನು ಹೆಚ್ಚಳ ಮಾಡಿ ರೈತರಿಗೆ ಬರೆ ಎಳೆದಿದೆ. ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಬರಪೀಡಿತ ಪ್ರದೇಶಗಳಿಗೆ ಸಚಿವರು ಭೇಟಿ ನೀಡಿಲ್ಲ. ಒಂದು ವರ್ಷದ ಸಂಭ್ರಮಾಚರಣೆ ಮಾಡುವ ನೈತಿಕತೆ ಸರಕಾರಕ್ಕೆ ಇಲ್ಲ ಎಂದರಲ್ಲದೇ, ನೀತಿ ಸಂಹಿತೆ ಮುಗಿದ ಅನಂತರ ಪ್ರತಿಭಟನೆ ನಡೆಸಲಿದ್ದೇವೆ.

ಜಿಲ್ಲಾ ವಕ್ತಾರರಾದ ವಿಜಯ ಕುಮಾರ್‌ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

Advertisement

ಎನ್‌ಡಿಎ ಒಕ್ಕೂಟಕ್ಕೆ ಗೆಲುವು: ಗುರ್ಮೆ
ಕಾಪು: ವಿಧಾನಪರಿಷತ್‌ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದರು.

ಪಕ್ಷದ ಕಾಪು ಮಂಡಲ ಕಚೇರಿ ಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮತ್ತು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರ ಉಪಸ್ಥಿತಿ ಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌, ಶಾಸಕ ಯಶ್‌ಪಾಲ್‌ ಸುವರ್ಣ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ಜಾತ್ಯತೀತ ಜನತಾ ದಳ (ಜೆಡಿಎಸ್‌) ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಬಾಲಾಜಿ, ಉಡುಪಿ – ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ ಸಹಿತ ಪ್ರಮುಖ ನಾಯಕರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next