Advertisement
ಮಕ್ಕಳು, ಪೋಷಕರು, ಶಿಕ್ಷಕರು ಸಂಕಷ್ಟ ಎದರಿಸುವಂತಾಗಿದೆ. ಶಿಕ್ಷಣದ ನೀತಿ ನಿಯಮಗಳ ಬಗ್ಗೆ ಒಂದಿನಿತು ಕಲ್ಪನೆಯೂ ಇಲ್ಲದಂತೆ ರಾಜ್ಯ ಸರಕಾರ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.
Related Articles
Advertisement
ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ರಾಜೇಶ್ ನಾೖಕ್, ಹರೀಶ್ ಪೂಂಜ, ಭಾಗೀರಥಿ ಮುರುಳ್ಯ, ವಿ. ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಲೋಕಸಭಾ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಉಪಮೇಯರ್ ಸುನೀತಾ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ, ಬಿಜೆಪಿ ಪ್ರಮುಖರಾದ ಕ್ಯಾ| ಗಣೇಶ್ ಕಾರ್ಣಿಕ್, ಉದಯ್ ಕುಮಾರ್ ಶೆಟ್ಟಿ, ಡಿ.ಎಸ್. ಅರುಣ್, ದತ್ತಾತ್ರೇಯ, ಶರಣ್, ತಮ್ಮೇಶ್ ಗೌಡ, ಮಂಜುಳಾ ರಾವ್, ನಿತಿನ್ ಕುಮಾರ್, ನಂದನ್ ಮಲ್ಯ ಉಪಸ್ಥಿತರಿದ್ದರು.ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ವಾಗತಿಸಿದರು. ವಿಕಾಸ್ ಪುತ್ತೂರು ವಂದಿಸಿದರು.
ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆರಾಜ್ಯದಲ್ಲಿ ಕಾಂಗ್ರೆಸ್ ಸರಕಾರವನ್ನು ಆಯ್ಕೆ ಮಾಡಿದ ಮತದಾರರಿಗೆ ಈಗ ತಲೆ ಮೇಲೆ ಚಪ್ಪಡಿ ಕಲ್ಲು ಎಳೆದಂತಾಗಿದೆ. ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ, ಸಚಿವರು, ಶಾಸಕರು ಒಂದೂ ಗುದ್ದಲಿ ಪೂಜೆ ಮಾಡಿಲ್ಲ. ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಪಾಕಿಸ್ಥಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಜೈಲಿಗೆ ಹಾಕಿಲ್ಲ. ಅಲ್ಪಸಂಖ್ಯಾಕರ ಈ ತುಷ್ಟೀಕರಣ ನೀತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್ ಸರಕಾರ ರಕ್ಷಣೆಗಿದೆ ಎಂಬ ಕಾರಣಕ್ಕೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಗಲಭೆ ಮಾಡುವ ದುಸ್ಸಾಹಸ ನಡೆದಿದೆ. ರಾಜ್ಯದಲ್ಲಿ ಚುನಾಯಿತ ಸರಕಾರ, ಸಿಎಂ, ಮಂತ್ರಿಮಂಡಲ ಇದೆ ಎನ್ನುವ ಭರವಸೆಯೇ ಜನರಿಂದ ಅಳಿಸಿ ಹೋಗಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದರು.