Advertisement

ಶಿಕ್ಷಣ ಕ್ಷೇತ್ರ ಹದಗೆಡಿಸಿದ ಕಾಂಗ್ರೆಸ್‌: ಬಿ.ವೈ. ವಿಜಯೇಂದ್ರ

12:17 AM May 28, 2024 | Team Udayavani |

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಕ್ಷೇತ್ರದ ಸುಧಾರಣೆಗಾಗಿ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ರಾಜ್ಯದಲ್ಲಿ ಕಾಂಗ್ರೆಸ್‌ ಕೈಬಿಟ್ಟು ಹೊಸ ಶಿಕ್ಷಣ ನೀತಿ (ಎಸ್‌ಇಪಿ) ತರುತ್ತೇವೆ ಎಂದು ಹೇಳಿ ಶಿಕ್ಷಣ ಕ್ಷೇತ್ರವನ್ನೇ ಸಂಪೂರ್ಣ ಹದಗೆಡಿಸಲಾಗಿದೆ.

Advertisement

ಮಕ್ಕಳು, ಪೋಷಕರು, ಶಿಕ್ಷಕರು ಸಂಕಷ್ಟ ಎದರಿಸುವಂತಾಗಿದೆ. ಶಿಕ್ಷಣದ ನೀತಿ ನಿಯಮಗಳ ಬಗ್ಗೆ ಒಂದಿನಿತು ಕಲ್ಪನೆಯೂ ಇಲ್ಲದಂತೆ ರಾಜ್ಯ ಸರಕಾರ ವರ್ತಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ವಿಧಾನ ಪರಿಷತ್‌ನ ನೈಋತ್ಯ ಪದವೀಧರರ ಹಾಗೂ ಶಿಕ್ಷಕರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾದ ಬಿಜೆಪಿ ಕಾರ್ಯ ಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಸಾವಿರಕ್ಕೂ ಅಧಿಕ ಪ್ರೌಢಶಾಲೆ, 50ಕ್ಕೂ ಅಧಿಕ ಪಾಲಿಟೆಕ್ನಿಕ್‌, 600ಕ್ಕೂ ಅಧಿಕ ಪ.ಪೂ. ಕಾಲೇಜುಗಳ ನಿರ್ಮಿಸಲಾಗಿದೆ. 5ನೇ ವೇತನ ಆಯೋಗದ ಶಿಫಾರಸು ಯಥಾವತ್‌ ಅನುಷ್ಠಾನ, ಅತಿಥಿ ಉಪನ್ಯಾಸಕರ ಗೌರವಧನ 14 ಸಾವಿರ ರೂ.. ಇದ್ದದ್ದನ್ನು 34 ಸಾವಿರ ರೂ.ಗೆ ಏರಿಕೆ ಮಾಡುವ ತೀರ್ಮಾನ ಬಿಜೆಪಿ ಸರಕಾರದ ಕಾಲದಲ್ಲಿ ಆಗಿದೆ. 2005-06ರಲ್ಲಿ ಶಿಕ್ಷಣ ಕ್ಷೇತ್ರಕ್ಕೆ 4.5 ಸಾವಿರ ಕೋ.ರೂ. ಬಜೆಟ್‌ ಮೀಸಲಿಟ್ಟಿದ್ದರೆ, ಬಿಜೆಪಿ ಬಂದ ಮೇಲೆ 18 ಸಾವಿರ ಕೋ.ರೂ.ಗೆ ಏರಿಸಲಾಗಿತ್ತು. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಿದ್ದು ಬಿಜೆಪಿ ಕಾಲದಲ್ಲಿ ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಮಾತನಾಡಿ, ರಾಜ್ಯ ಸರಕಾರ ಎಲ್ಲ ವಿಭಾಗದಲ್ಲಿಯೂ ವೈಫ‌ಲ್ಯವಾಗಿದೆ. ಕಾನೂನು, ಶಿಕ್ಷಣ, ಕೃಷಿ ಸಹಿತ ಸಂಪೂರ್ಣ ಸಂಪುಟವೇ ವಿಫಲವಾಗಿ ಅಭಿವೃದ್ಧಿಯೇ ಮರೀಚಿಕೆ ಯಾಗಿದೆ ಎಂದರು. ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಮಾತನಾಡಿ, ಸಂಘಟನೆಯಲ್ಲಿ ಶಕ್ತಿ ಇದೆ. ರಾಮನ ಮಂದಿರ ನಮ್ಮ ಅಸ್ತಿತ್ವ. ನಾವು ಇನ್ನಷ್ಟು ಬಲಯುತವಾಗಿ ಪಿಕ್‌ ಪಾಕೆಟ್‌ ಕಾಂಗ್ರೆಸ್‌ ಅನ್ನು ದೂರ ಮಾಡೋಣ ಎಂದರು.

Advertisement

ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ, ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾೖಕ್‌, ಹರೀಶ್‌ ಪೂಂಜ, ಭಾಗೀರಥಿ ಮುರುಳ್ಯ, ವಿ. ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಲೋಕಸಭಾ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಉಪಮೇಯರ್‌ ಸುನೀತಾ, ಜೆಡಿಎಸ್‌ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, ಯುವ ಜೆಡಿಎಸ್‌ ಅಧ್ಯಕ್ಷ ಅಕ್ಷಿತ್‌ ಸುವರ್ಣ, ಬಿಜೆಪಿ ಪ್ರಮುಖರಾದ ಕ್ಯಾ| ಗಣೇಶ್‌ ಕಾರ್ಣಿಕ್‌, ಉದಯ್‌ ಕುಮಾರ್‌ ಶೆಟ್ಟಿ, ಡಿ.ಎಸ್‌. ಅರುಣ್‌, ದತ್ತಾತ್ರೇಯ, ಶರಣ್‌, ತಮ್ಮೇಶ್‌ ಗೌಡ, ಮಂಜುಳಾ ರಾವ್‌, ನಿತಿನ್‌ ಕುಮಾರ್‌, ನಂದನ್‌ ಮಲ್ಯ ಉಪಸ್ಥಿತರಿದ್ದರು.ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸ್ವಾಗತಿಸಿದರು. ವಿಕಾಸ್‌ ಪುತ್ತೂರು ವಂದಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಮರೀಚಿಕೆ
ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವನ್ನು ಆಯ್ಕೆ ಮಾಡಿದ ಮತದಾರರಿಗೆ ಈಗ ತಲೆ ಮೇಲೆ ಚಪ್ಪಡಿ ಕಲ್ಲು ಎಳೆದಂತಾಗಿದೆ. ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ, ಸಚಿವರು, ಶಾಸಕರು ಒಂದೂ ಗುದ್ದಲಿ ಪೂಜೆ ಮಾಡಿಲ್ಲ. ಅಭಿವೃದ್ಧಿ ಸಂಪೂರ್ಣ ಮರೀಚಿಕೆಯಾಗಿದೆ. ಪಾಕಿಸ್ಥಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಜೈಲಿಗೆ ಹಾಕಿಲ್ಲ. ಅಲ್ಪಸಂಖ್ಯಾಕರ ಈ ತುಷ್ಟೀಕರಣ ನೀತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕಾಂಗ್ರೆಸ್‌ ಸರಕಾರ ರಕ್ಷಣೆಗಿದೆ ಎಂಬ ಕಾರಣಕ್ಕೆ ಚನ್ನಗಿರಿ ಪೊಲೀಸ್‌ ಠಾಣೆಯಲ್ಲಿ ಗಲಭೆ ಮಾಡುವ ದುಸ್ಸಾಹಸ ನಡೆದಿದೆ. ರಾಜ್ಯದಲ್ಲಿ ಚುನಾಯಿತ ಸರಕಾರ, ಸಿಎಂ, ಮಂತ್ರಿಮಂಡಲ ಇದೆ ಎನ್ನುವ ಭರವಸೆಯೇ ಜನರಿಂದ ಅಳಿಸಿ ಹೋಗಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next