Advertisement

ಮನೆ ಮನೆಗೆ ಕಾಂಗ್ರೆಸ್‌ ಯಶಸ್ವಿಗೊಳಿಸಿ

11:56 AM Nov 05, 2017 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನಾಲ್ಕೂವರೆ ವರ್ಷಗಳಿಂದ ಮಾಡಿರುವ ಜನಪರ ಕಾರ್ಯಗಳನ್ನು ಮನೆ ಮನೆಗೆ ಕಾಂಗ್ರೆಸ್‌ ಕಾರ್ಯಕ್ರಮದ ಮೂಲಕ ಜನರಿಗೆ ತಲುಪಿಸಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಶ್ರಮಿಸಬೇಕೆಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

Advertisement

ಶ್ರೀರಾಂಪುರದಲ್ಲಿ ಶನಿವಾರ ನಡೆದ ವರುಣಾ, ಚಾಮುಂಡೇಶ್ವರಿ ಕ್ಷೇತ್ರದ ಬೂತ್‌ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿಯೇ ಕಾಂಗ್ರೆಸ್‌ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ 2018ರ ಚುನಾವಣೆ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.  

ಕಾಂಗ್ರೆಸ್‌ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ ಮನೆಗೆ ಹೋಗಿ ತಿಳಿಸುವುದರ ಜೊತೆಗೆ ಕೇಂದ್ರದ ಬಿಜೆಪಿ ಸರ್ಕಾರ ಶ್ರೀಮಂತರ ಪರ, ಉದ್ಯಮಿಗಳ ಪರ ಕೆಲಸ ಮಾಡುತ್ತಿರುವುದನ್ನು ಮನದಟ್ಟು ಮಾಡಬೇಕು. ಪ್ರತಿಯೊಂದು ಮನೆಯ ಮಾಹಿತಿಯನ್ನು ಕಲೆಹಾಕಿ ಮತದಾರರ ಪಟ್ಟಿಯಲ್ಲಿ ಇಲ್ಲದವರ ಹೆಸರನ್ನು ಸೇರಿಸಬೇಕು ಎಂದು ಕಿವಿಮಾತು ಹೇಳಿದರು.  

ಚಾಮುಂಡೇಶ್ವರಿ ಕ್ಷೇತ್ರ ಹಾಗೂ ವರುಣಾ ಕ್ಷೇತ್ರದಲ್ಲಿ ಮನೆಮನೆಗೆ ಕಾಂಗ್ರೆಸ್‌ ಕಾರ್ಯಕ್ರಮ ಸರಿಯಾಗಿ ಆಗಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಬ್ಲಾಕ್‌ ಅಧ್ಯಕ್ಷರು, ಬೂತ್‌ಮಟ್ಟದ ಪದಾಧಿಕಾರಿಗಳು, ಜಾಗ್ರತೆ ವಹಿಸಿ ಮನೆಮನೆಗೆ ಕಾಂಗ್ರೆಸ್‌ ಕಾರ್ಯಕ್ರಮವನ್ನು ತಲುಪಿಸಿ ಎಂದು ಹೇಳಿದರು.

ಮಾಜಿ ಶಾಸಕ ಎಂ.ಸತ್ಯನಾರಾಯಣ, ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ನಂತರ ರಾಜ್ಯ ಮತ್ತು ಈ ಜಿಲ್ಲೆಗೆ ಹೆಚ್ಚು ಕೆಲಸ ಮಾಡಿರುವವರು ಸಿದ್ದರಾಮಯ್ಯನವರು. ಅಂತಹವರನ್ನೇ ಪ್ರಶ್ನೆ ಮಾಡುವ ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದರು.

Advertisement

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಕೆಪಿಸಿಸಿ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ, ಕೆ.ಸಿ.ಬಲರಾಂ, ಮಹದೇವ್‌, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಸಿ.ಎನ್‌.ಮಂಜೇಗೌಡ, ಮಾಜಿ ಮೇಯರ್‌ ಟಿ.ಬಿ.ಚಿಕ್ಕಣ್ಣ, ಜಿಪಂ ಸದಸ್ಯರಾದ ರಾಕೇಶ್‌ ಪಾಪಣ್ಣ, ಅರುಣ್‌ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಮುದ್ದೇಗೌಡ, ಉಮಾಶಂಕರ್‌, ಸಿದ್ದರಾಜು ಮತ್ತಿತರರಿದ್ದರು.  

Advertisement

Udayavani is now on Telegram. Click here to join our channel and stay updated with the latest news.

Next