ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮುಂದಿನ ಸೋಮವಾರ ಸಂಜೆ (ಜು.19) ದೆಹಲಿ ವಿಮಾನ ಏರಲಿದ್ದಾರೆ.
ಮಂಗಳವಾರ ಸಿದ್ದರಾಮಯ್ಯ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ‘ಮುಂದಿನ ಸಿಎಂ’ ಹೇಳಿಕೆಗಳ ನಡುವೆ ಸಿದ್ದರಾಮಯ್ಯರಿಗೆ ಹೈಕಮಾಂಡ್ ಆಹ್ವಾನ ಇದೀಗ ಕೈ ಪಾಳಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ:ದೆಹಲಿ ಪ್ರವಾಸ ಮುಗಿಸಿದ ಕೂಡಲೇ ಸಚಿವ ಸಂಪುಟ ಸಭೆ ಕರೆದ ಸಿಎಂ!
ರಾಜ್ಯ ಪದಾಧಿಕಾರಿಗಳ ನೇಮಕದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದರು. ಅವರು ತಮ್ಮ ಒಂದು ಪಟ್ಟಿಯನ್ನು ವರಿಷ್ಠರಿಗೆ ನೀಡಿ ಬಂದಿದ್ದರು. ಬಳಿಕ ಸಿದ್ದರಾಮಯ್ಯ ಕೂಡಾ ಒಂದು ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದರು ಎನ್ನಲಾಗಿದೆ. ಇದೀಗ ಇದೇ ವಿಚಾರದ ಬಗ್ಗೆ ಚರ್ಚೆ ಮಾಡಲು ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಕರೆ ಮಾಡಿದೆ ಎನ್ನಲಾಗಿದೆ.
ಇದನ್ನೂ ಓದಿ: ಯಡಿಯೂರಪ್ಪ ಜೊತೆ ಆರು ದೊಡ್ಡ ದೊಡ್ಡ ಬ್ಯಾಗ್ ಗಳೂ ದೆಹಲಿಗೆ ಹೋಗಿದೆ!: ಎಚ್ ಡಿಕೆ ಹೊಸ ಬಾಂಬ್