Advertisement

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

02:46 PM Oct 07, 2024 | keerthan |

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ವಕ್ಫ್ ಸಚಿವ ಜಮೀರ್ ಅಹಮದ್ (Zameer Ahmed) ಹೇಳಿದರು.

Advertisement

ವಿಜಯದಶಮಿ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ಯಾರು? ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡಾ? ಅವರು ಬಿಜೆಪಿ ರಾಜ್ಯಾಧ್ಯಕ್ಷ. ಅವರು ಹೇಳಿದ ಕೂಡಲೇ ರಾಜೀನಾಮೆ ಕೊಡೋಕೆ ಆಗುತ್ತಾ ಎಂದು ಮರು ಪ್ರಶ್ನಿಸಿದರು.

ನಮ್ಮ ಪಕ್ಷದ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಇರುವ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಅಲ್ಲದೆ ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಹೈಕಮಾಂಡ್ ನಿಮ್ಮ ಜತೆ ಇದೆ ಎಂಬುವುದನ್ನು ಬೆಂಗಳೂರಿಗೆ ಬಂದು ತಿಳಿಸಿದ್ದಾರೆ ಎಂದರು.

ಕಾರ್ಯಕ್ರಮವೊಂದರಲ್ಲಿ ‘ಮುಂದಿನ ಸಿಎಂ ಸತೀಶ ಜಾರಕಿಹೊಳಿ’ ಎಂಬ ಘೋಷಣೆ ಕೇಳಿ ಬಂದ ಬಗ್ಗೆ ಪ್ರತಿಕ್ರಿಯಿಸಿದ ಜಮೀರ್, ಅಭಿಮಾನಿಗಳು ಕೂಗುತ್ತಾರೆ. ಹಾಗಂತ ಸಿಎಂ ಆಗಿ ಬಿಡುತ್ತಾರಾ? ನನ್ನ ಅಭಿಮಾನಿಗಳು ಕೂಗುತ್ತಾರೆ. ನಾನು ಸಿಎಂ ಆಗುತ್ತೇನಾ? ಎಂದರು.

Advertisement

Udayavani is now on Telegram. Click here to join our channel and stay updated with the latest news.

Next