ಪಣಜಿ: ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ರವರು ತಮ್ಮ ಸಚಿವ ಸಂಪುಟಕ್ಕೆ ಮೂವರು ಮಹಿಳಾ ಶಾಸಕರನ್ನು ಸೇರಿಸಿಕೊಳ್ಳುವ ಮೂಲಕ ಅವರನ್ನು ಗೌರವಿಸಲು ಬಿಜೆಪಿ ಬದ್ಧವಾಗಿದೆ ಎಂಬುದನ್ನು ಪ್ರಮೋದ್ ಸಾವಂತ್ ಸಾಬೀತುಪಡಿಸಬೇಕು ಎಂದು ಗೋವಾ ರಾಜ್ಯ ಕಾಂಗ್ರೆಸ್ ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಒತ್ತಾಯಿಸಿದ್ದಾರೆ.
ಈ ಪ್ರಕ್ರಿಯೆಗೆ ಬಗ್ಗೆ ಮುಖ್ಯಮಂತ್ರಿ ಅವರೇ ತೀರ್ಮಾನ ಕೈಗೊಳ್ಳಬಹುದು ಎಂದು ಅವರು ಹೇಳಿದರು.
ಪಣಜಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೋವಾ ವಿಧಾನಸಭೆಯಲ್ಲಿ ಮಹಿಳೆಯರಿಗೆ 13 ಸ್ಥಾನಗಳನ್ನು ಮೀಸಲಿಡಲಾಗುವುದು ಎಂದು ಸಾವಂತ್ ಹೇಳಿಕೆ ನೀಡಿದ ನಂತರ, ಇದೇ ವೇಳೆ ಚೋಡಂಕರ್ ಅವರ ಸಂಪುಟದಲ್ಲಿ ಕನಿಷ್ಠ ಒಬ್ಬ ಮಹಿಳೆ ಏಕೆ ಇಲ್ಲ ಎಂದು ಪ್ರಶ್ನಿಸಿದರು.
ವಿಧಾನಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತವಿದೆ. ಮುಖ್ಯಮಂತ್ರಿ ಸಾವಂತ್ ರವರು ಮೂವರು ಚುನಾಯಿತ ಮಹಿಳಾ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ನಿರ್ಧರಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಹಿಳೆಯರಿಗೆ ಗೌರವ ಕೊಡುತ್ತೇವೆ ಎಂದು ಹೇಳುವಾಗ ಅವರಿಗೂ ಸಚಿವ ಸ್ಥಾನ ಕೊಡುವ ಬಗ್ಗೆ ಯೋಚಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಅವರನ್ನು ಗೌರವಿಸಲು ಏಕೆ ವಿಫಲರಾದರು ಎಂದು ಕೇಳಿದ್ದಾರೆ.
‘ಗೋವಾ ಮೊದಲ ರಾಜ್ಯ’ ಎಂದು ಸಾವಂತ್ ಆಗಾಗ್ಗೆ ಹೇಳಿಕೊಳ್ಳುತ್ತಾರೆ. ಮಹಿಳೆಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ವಿಧಾನಸಭೆಯಲ್ಲಿ 33 ಪ್ರತಿಶತ ಮಹಿಳೆಯರಿಗೆ ‘ಗೌರವ’ ನೀಡುವ ಮೊದಲ ರಾಜ್ಯವಾಗಿ ಗೋವಾವನ್ನು ಮಾಡಲು ಈಗ ನಮಗೆ ಅವಕಾಶ ಸಿಕ್ಕಿದೆ ಎಂದು ಹೇಳುವ ಮೂಲಕ ಚೋಡಣಕರ್ ರವರು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಗೆ ಸವಾಲೆಸೆದಿದ್ದಾರೆ.