Advertisement
ಇದನ್ನೂ ಓದಿ : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ; ಅಂತಿಮ ಪಟ್ಟಿ ಈ ವಾರ ಪ್ರಕಟ:ಬಿ.ಸಿ ನಾಗೇಶ್
Related Articles
Advertisement
ಭ್ರಷ್ಟಾಚಾರಕ್ಕೂ ಜಾತಿಗೂ ಯಾವುದೇ ಸಂಬಂಧ ಇಲ್ಲ ಎಂಬುದು ಸತ್ಯ. ಆದರೆ ಪ್ರಬಲ ಸಮುದಾಯದ ಸಿಎಂ ಇದ್ದಾಗ, ಅವರನ್ನು ವಿಶೇಷವಾಗಿ ಟಾರ್ಗೆಟ್ ಮಾಡುವುದು ಕಾಂಗ್ರೆಸ್‌ನ ಸಂಪ್ರದಾಯ ಎಂದು ಹೇಳಿದ್ದೇನೆ. ಕಾಂಗ್ರೆಸ್ ಸದಾ ಪ್ರಬಲ ಸಮುದಾಯದ ವಿರುದ್ಧ ನಿಂತಿದೆ. ಯಾವ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಪ್ಪಿದ್ದಾರೆ ಎಂಬುದನ್ನು ಕಾಂಗ್ರೆಸ್ ಹೇಳಬೇಕು. ಅವರು ಸಮರ್ಥ ಆಡಳಿತ ನೀಡುತ್ತಿರುವುದರಿಂದಲೇ ತಮಗೆ ಉಳಿಗಾಲ ಇಲ್ಲ ಎಂಬುದು ಕಾಂಗ್ರೆಸ್‌ಗೆ ಅರ್ಥವಾಗಿದೆ ಎಂದರು.
ಆಂಬ್ಯುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾದಾಗ ಕೆಲವೇ ಗಂಟೆಗಳಲ್ಲಿ ಸಮಸ್ಯೆ ಸರಿಪಡಿಸಲಾಗಿದೆ. ಇಂತಹ ತ್ವರಿತ ಕಾರ್ಯವನ್ನು ʼತಳ್ಳುವ ಸರ್ಕಾರʼ ಮಾಡುತ್ತದೆಯೇ ಅಥವಾ ʼಸರ್ವಶಕ್ತ ಕ್ರಿಯಾಶೀಲ ಸರ್ಕಾರʼ ಮಾಡುತ್ತದೆಯೇ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರೇ ವಿಚಾರ ಮಾಡಬೇಕು ಎಂದರು.
ಕೆಲವೇ ಗಂಟೆಗಳ ಕಾಲ ಆಂಬ್ಯುಲೆನ್ಸ್ ಸೇವೆಗೆ ಅಡಚಣೆ ಉಂಟಾಗಿತ್ತು. ನಿನ್ನೆ ಮಧ್ಯಾಹ್ನ 3 ಗಂಟೆಯಿಂದಲೇ ಸೇವೆ ಪುನರಾರಂಭವಾಗಿದೆ. ತಾಂತ್ರಿಕ ಸಮಸ್ಯೆ ಪರಿಹರಿಸಲು ಸುಮಾರು 8 ಲಕ್ಷ ರೂ. ವೆಚ್ಚದ ಮದರ್‌ಬೋರ್ಡ್ ಖರೀದಿಗೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾನ್ಯುವಲ್ ಕಾಲ್‌ಸೆಂಟರ್‌ಗೂ ಬ್ಯಾಕ್‌ಅಪ್ ಇರಿಸಲಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಭೇಟಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಸಚಿವ ಡಾ.ಕೆ.ಸುಧಾಕರ್ ಭೇಟಿ ಮಾಡಿದರು. ನಂತರ ಮಾತನಾಡಿದ ಅವರು, ಹುಟ್ಟು ಹೋರಾಟಗಾರ, ಹಿರಿಯ ಚೇತನ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನೆಗೆ ಭೇಟಿ ನೀಡಿ ಮಾತನಾಡಿಸಿದೆ. ಅವರನ್ನು ನೋಡಿದರೆ ನನಗೆ ಭಕ್ತಿಯ ಭಾವ ಮೂಡಿಬರುತ್ತದೆ. ಮೊಣಕಾಲಿನ ತೊಂದರೆ ಬಿಟ್ಟರೆ, ಅವರು ಬಹಳ ಆರೋಗ್ಯವಂತರಾಗಿದ್ದಾರೆ. ಜತೆಗೆ ಅವರ ಮಾನಸಿಕ ಶಕ್ತಿಯೂ ಗಟ್ಟಿಯಾಗಿದೆ. ಅವರಿಗೆ ಉತ್ತಮ ಆರೋಗ್ಯ ದೊರೆತು ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡಲಿ ಎಂದು ಆಶಿಸುತ್ತೇನೆ. ಮಾಜಿ ಪ್ರಧಾನಿಗಳ ಪೈಕಿ ಸಕ್ರಿಯರಾಗಿ ಜನಸೇವೆಯಲ್ಲಿ ತೊಡಗಿರುವವರೇ ದೇವೇಗೌಡರು. ಆದ್ದರಿಂದಲೇ ಅವರು ಮಹಾಚೇತನ ಎಂದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಸಂಜೆ ಹಾಗೂ ಬೆಳಗ್ಗೆ ನಾನು ಅವರ ಆರೋಗ್ಯದ ಕುರಿತು ಅಪ್‌ಡೇಟ್ ಪಡೆಯುತ್ತಿದ್ದೇನೆ. ಅವರು ಬೇಗ ಗುಣಮುಖರಾಗಿ ರಾಜ್ಯದ ಸೇವೆಗೆ ಮರಳಲಿದ್ದಾರೆ ಎಂದರು.