Advertisement

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

10:47 AM Nov 30, 2021 | Team Udayavani |

ಗಂಗಾವತಿ: ಪ್ರತಿಯೊಬ್ಬರ ಮೂಲ ಊರು ಬೇರೆ ಆಗಿರುತ್ತದೆ ನಾನು ಸಹ ಬೆಳಗಾವಿ ಜಿಲ್ಲೆಯಿಂದ ರಾಯಚೂರು ಜಿಲ್ಲೆಗೆ ವಲಸೆ ಬಂದು ಇಲ್ಲಿಯೇ ನೆಲೆಸಿದ್ದೇನೆ. ಕಾಂಗ್ರೆಸ್ ಪಕ್ಷದವರು ನಾನು ಸ್ಥಳೀಯನಲ್ಲ ಎನ್ನುವ ಅಪಪ್ರಚಾರವನ್ನು ಕೂಡಲೇ ನಿಲ್ಲಿಸುವಂತೆ ರಾಯಚೂರು ಕೊಪ್ಪಳ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಆಗ್ರಹ ವ್ಯಕ್ತಪಡಿಸಿದರು.

Advertisement

ಅವರು ಮಂಗಳವಾರ ಮಾಜಿ ಸಂಸದ ಎಚ್ ಜಿ ರಾಮುಲು ನಿವಾಸಕ್ಕೆ ಭೇಟಿ ನೀಡಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಎಚ್ ಜಿ ರಾಮುಲು ಹಾಗೂ ಎಚ್ ಆರ್ ಶ್ರೀನಾಥ್ ಅಖಂಡ ರಾಯಚೂರು ಜಿಲ್ಲೆಯ ಪ್ರಮುಖ ಮುಖಂಡರಾಗಿದ್ದು ಸಮಗ್ರ ಜಿಲ್ಲೆಯ ಅಭಿವೃದ್ಧಿಗಾಗಿ ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ ತಮ್ಮ ಜೀವನವನ್ನೇ ಸವೆಸಿದ್ದು ಎಂಎಲ್ಸಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ ರಾಯಚೂರು ಕೊಪ್ಪಳ ಜಿಲ್ಲೆಯ ಗ್ರಾಮ ಪಂಚಾಯತ್ ನಗರಸಭೆ ಜಿಪಂ ತಾಪಂ ಅಭಿವೃದ್ಧಿಗಾಗಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದು ಹಿರಿಯರಾದ ರಾಮುಲು ಆಶೀರ್ವಾದ ಮಾಡಿದ್ದಾರೆ ಎಂದರು.

ವಿಶ್ವ ಕಂಡ ಅಪ್ರತಿಮ ನಾಯಕ ನರೇಂದ್ರ ಮೋದಿ ಹಾಗೂ ರಾಜ್ಯದ ರೈತ ಗ್ರಾಮೀಣ ಭಾಗದ ಜನರ ಆಶಾಕಿರಣ ಬಿ.ಎಸ್ ಯಡಿಯೂರಪ್ಪ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಮಾಡಿದ ಕಾರ್ಯಗಳನ್ನು ಮೆಚ್ಚಿ ಗ್ರಾಮ ಪಂಚಾಯತ್ ಮತ್ತು ನಗರಸಭೆ ಸದಸ್ಯರು ತಮ್ಮನ್ನು ಬೆಂಬಲಿಸಲಿದ್ದಾರೆ. ಕಾಂಗ್ರೆಸ್ ನವರು ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ. ಹಣದ ಆಮಿಷ ಒಡ್ಡಿ ಗ್ರಾಮಪಂಚಾಯತ್ ನಗರಸಭೆಯ ಸದಸ್ಯರ ಮತಗಳನ್ನು ಪಡೆಯುವುದು ಅಸಾಧ್ಯ. ಇದನ್ನು ಕಾಂಗ್ರೆಸ್ ನವರು ಮಾಡುತ್ತಿರುವುದು ಕೀಳು ರಾಜಕಾರಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

Advertisement

ಕಾಂಗ್ರೆಸ್ ಪಕ್ಷದವರು ಜಾತಿಯ ರಾಜಕಾರಣ ಮಾಡುತ್ತಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಗೆ ಪ್ರಧಾನಿ ನರೇಂದ್ರ ಮೋದಿ ಬಿ ಎಸ್ ಯಡಿಯೂರಪ್ಪ ವ್ಯಾಪಕವಾದಂತಹ ಶಕ್ತಿ ತುಂಬಿದ್ದಾರೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಮೂಲಕ ಗ್ರಾಮ ಪಂಚಾಯತ್ ನಗರಸಭೆ ಸದಸ್ಯರು ಜನರ ಮೂಲ ಸೌಕರ್ಯಗಳಿಗೆ ಸ್ಪಂದಿಸುವ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಲಿದೆ. ವಿಧಾನಪರಿಷತ್ ನಲ್ಲಿ ಗ್ರಾಪಂ, ಜಿಪಂ, ತಾಪಂ, ನಗರಸಭೆಗಳಿಗೆ ಇನ್ನಷ್ಟು ಅಧಿಕಾರ ಮತ್ತು ವೈಜ್ಞಾನಿಕ ಸಲಹೆ ಸೂಚನೆಗಳು ಲಭಿಸುವಂತಹ ಕಾರ್ಯವನ್ನು ತಾವು ಮಾಡುವುದಾಗಿ ಹೇಳಿದರು.

ಮಾಜಿ ಸಂಸದ ಎಚ್.ಜಿ. ರಾಮುಲು ಮಾತನಾಡಿ ಸಂವಿಧಾನದ ಆಶಯದಂತೆ ಇದುವರೆಗೂ ಅಧಿಕಾರ ನಡೆಸಿದ ಅವರಿಗೆ ರಾಜಕೀಯ ಶಕ್ತಿ ದೊರಕಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ವಿಶ್ವನಾಥ್ ಬನಹಟ್ಟಿ ಗೆಲುವು ಸಾಧಿಸಿ ಗ್ರಾಪಂ, ಜಿಪಂ, ತಾಪಂ, ನಗರಸಭೆಗಳಿಗೆ ಇನ್ನಷ್ಟು ಶಕ್ತಿ ತುಂಬುವ ಕಾರ್ಯವನ್ನು ಮಾಡಲಿ ಎಂದು ಶುಭ ಕೋರಿದರು. ಈ ಸಂದರ್ಭದಲ್ಲಿ ಮಾಜಿ ಎಂಎಲ್ಸಿ ಎಚ್ ಆರ್ ಶ್ರೀನಾಥ್ ಮುಖಂಡರಾದ ವೀರನಗೌಡ, ಜೋಗದ ಲಿಂಗಪ್ಪ ನಾಯ್ಕ ,ಹನುಮಂತ ರಾಯ, ಭಾಗಣ್ಣ ಕಡ್ಲಿ ಸೇರಿದಂತೆ ಅನೇಕ ಮುಖಂಡರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next