ಸಂತೆಮರಹಳ್ಳಿ: ಸಮೀಪದ ಬಡಗಲಮೋಳೆ, ಕುದೇರು ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ವೀಕ್ಷಕಿ ಪುಷ್ಪಾ ನೇತೃತ್ವದಲ್ಲಿ ಕಾಂಗ್ರೆಸ್ ಪಂಚಾಯ್ತಿ ಸದಸ್ಯರು ಹಾಗೂ ಕಾರ್ಯಕರ್ತರು ಮನೆಮನೆಗೆ ತೆರಳಿ ಕಾಂಗ್ರೆಸ್ ಸಾಧನೆಗಳನ್ನು ತಿಳಿಸುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸಿದರು.
ಕರ್ನಾಟಕ ರಾಜ್ಯ ಮುಕ್ತ ವಿವಿಯ ಸಿಂಡಿಕೇಟ್ ಸದಸ್ಯ ಕಿನಕಹಳ್ಳಿ ರಾಚಯ್ಯ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾವåಯ್ಯ ಬಡವರ ಪರವಾಗಿ, ಜಾತ್ಯತೀತ ನಿಲುವುಗಳ ಮೂಲಕ ಸಾಕಷ್ಟು ಜನಪರ ಕಾರ್ಯಕ್ರಮ ನೀಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 3.8 ಕೋಟಿ ಜನರ ಹಸಿವು ನೀಗಿದೆ. 65 ಲಕ್ಷ ವಿದ್ಯಾರ್ಥಿಗಳು ಬಿಸಿಯೂಟದ ಲಾಭ ಪಡೆಯುತ್ತಿದ್ದಾರೆ.
26 ಮಹಿಳಾ ಕಾಲೇಜುಗಳು, 25 ಹೊಸ ಪಾಲಿಟೆಕ್ನಿಕ್ ಕಾಲೇಜುಗಳು ಆರಂಭಗೊಂಡಿವೆ ಎಂದು ಹೇಳಿದರು. ವಿದ್ಯಾಸಿರಿ ಯೋಜನೆಯಡಿಯಲ್ಲಿ 21 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಿದೆ. ಹಿಂದುಳಿದ ವರ್ಗಗಳ 2.10 ಲಕ್ಷ ಫಲಾನುಭವಿಗಳಿಗೆ 765 ಕೋಟಿ ರೂ. ಸಹಾಯಧನ ವಿತರಿಸಲಾಗಿದೆ. ಅಲ್ಪಸಂಖ್ಯಾತರ ಇಲಾಖೆಯಿಂದ 50 ಲಕ್ಷ ಮಂದಿ ಲಾಭ ಪಡೆದುಕೊಂಡಿದ್ದಾರೆ.
ಇದರೊಂದಿಗೆ ಮೈತ್ರಿ, ಮನಸ್ವಿನಿ, ಗಂಗಾಕಲ್ಯಾಣ, ರೈತ ಕಲ್ಯಾಣ ಪರಿಶಿಷ್ಟ ಜಾತಿ ವರ್ಗಗಳ ಅಭಿವೃದ್ಧಿಗೆ ನಿಗಮಗಳ ಮೂಲಕ ಇದುವರೆಗೆ 47.186 ಕೋಟಿ ರೂ. ಹಣ ವ್ಯಯಿಸಲಾಗಿದೆ. 2.25 ಜನ ರೈತರ ಸಾಲಮನ್ನಾ ಮಾಡಲಾಗಿದೆ ಇವೆಲ್ಲ ದಾಖಲೆಗಳಾಗಿವೆ. ಇದನ್ನು ಮನೆ ಮನೆಗೆ ತರಳಿ ತಿಳಿಸುವುದೇ ಈ ಯೋಜನೆಯ ಉದ್ದೇಶ ಎಂದರು.
ಬಡವರಿಗಾಗಿಯೇ ಅನೇಕ ಜನಪರ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ ಹಾಗೂ ಮೂಲ ಸೌಕರ್ಯ ಒದಗಿಸುವುದು. ಮುಂತಾದ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಜನಪರ ಸರ್ಕಾರ ಎಂದು ಖ್ಯಾತಿ ಪಡೆದಿದೆ ಎಂದು ತಿಳಿಸಿದರು. ತಾಪಂ ಅಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ ಕಾರ್ಯಕ್ರಮಗಳು ಅತ್ಯುತ್ತಮವಾಗಿದೆ.
ಇಡೀ ದೇಶದಲ್ಲಿಯೇ ಜನಪರ ಕೆಲಸ ಮಾಡುವಲ್ಲಿ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಚಾಮರಾಜನಗರ ಜಿಲ್ಲೆಗೆ ಸಾವಿರಾರು ಕೋಟಿ ರೂ. ಅನುದಾನ ನೀಡುವ ಮೂಲಕ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು. ಮಾಜಿ ಶಾಸಕ ಎಸ್. ಬಾಲರಾಜು, ಚುನಾವಣಾ ವೀಕ್ಷಕಿ ಪುಷ್ಪ$ಮರನಾಥ್, ಆಲ್ದೂರು ರಾಜಶೇಖರ್, ಮಹಾದೇವಪ್ಪ, ರಾಜು ಇತರರು ಇದ್ದರು.