Advertisement

ಕಾಂಗ್ರೆಸ್ ಜನರ ಮನಸ್ಸಿನಿಂದ ದೂರವಾಗುತ್ತಿದೆ; ಮಾಜಿ ಸಚಿವೆ ಡಿಕೆ ತಾರಾದೇವಿ

09:28 AM May 26, 2019 | Nagendra Trasi |

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ಪಕ್ಷದ ಕಾರ್ಯಕರ್ತರಿಗೆ ಬೆಲೆ ನೀಡದ ಪರಿಣಾಮ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಬಹಿರಂಗವಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ವ್ಯಕ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಡಿಕೆ ತಾರಾದೇವಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಶನಿವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಜನರ ಮನಸ್ಸಿನಿಂದ ಕಾಂಗ್ರೆಸ್ ಪಕ್ಷ ದೂರವಾಗುತ್ತಿದೆ. ಅಷ್ಟೇ ಅಲ್ಲ ರಾಜ್ಯದಲ್ಲಿ ಮೈತ್ರಿ ಸರ್ಕಾರ ಜನರಲ್ಲಿ ನಂಬಿಕೆ ಮೂಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ಪರಸ್ಪರ ಟೀಕೆಯಿಂದ ಕಾರ್ಯಕರ್ತರಲ್ಲೂ ಗೊಂದಲ ಉಂಟಾಯಿತು. ಜನರ ನಂಬಿಕೆಯನ್ನು ಗಳಿಸುವಲ್ಲಿ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ರಾಹುಲ್ ಗಾಂಧಿ ರಾಜೀನಾಮೆ ಸಮಸ್ಯೆಗೆ ಉತ್ತರವಲ್ಲ. ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next