Advertisement

ರೈತರನ್ನು ಮುಂದಿಟ್ಟು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ: ಅಶೋಕ್ ಆಕ್ರೋಶ

02:38 PM Dec 11, 2020 | keerthan |

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಕಾಂಗ್ರೆಸ್ ಪ್ರೇರಿತವಾಗಿದ್ದು, ರೈತರನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನವರು ಬೇಕಂತಲೇ ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದು ಸಚಿವ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

Advertisement

ವಿಧಾನಸೌಧದಲ್ಲಿ ಸಚಿವ ಎಸ್. ಟಿ. ಸೋಮಶೇಖರ್ ಜೊತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ದೇವೇಗೌಡರು ನೇಗಿಲು ಹಿಡಿದು ಎಷ್ಟು ದಿನ ಆಯ್ತು ಎಂದು ಕೇಳುವವರು ನೇಗಿಲು ಹಿಡಿದಿದ್ದಾರಾ? ಭೂ ಸುಧಾರಣೆ ಕಾಯ್ದೆ ಬಗ್ಗೆ ಬಾಯಿ ಬಡಿದುಕೊಳ್ಳುತ್ತಿರುವ ಕಾಂಗ್ರೆಸ್ ನವರು ಜಿಂದಾಲ್ ಗೆ ಭೂಮಿ ಕೊಟ್ಟವರು ಎಂದರು.

ಗೋಹತ್ಯೆ ನಿಷೇಧ ಕಾಯ್ದೆ, ಎಪಿಎಂಸಿ, ಭೂ ಸುಧಾರಣೆ ಮೂರು ಕಾಯ್ದೆಗಳು ರೈತರ ಪರವಾಗಿದೆ ಎಂದು ಸರ್ಕಾರದ ನಿರ್ಧಾರಗಳನ್ನು ಸಮರ್ಥಿಸಿಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next