Advertisement

ಕಾಂಗ್ರೆಸ್ ನಿಂದ ಜಾತಿಗಳ ಮಧ್ಯೆ ವೈಷಮ್ಯ ತರುವ ಕೆಲಸ: ಮಾಲೀಕಯ್ಯ ಗುತ್ತೇದಾರ್

06:58 PM Jan 19, 2022 | Team Udayavani |

ಬೆಂಗಳೂರು: ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇರಳ ಕಳುಹಿಸಿದೆ ಎಂಬ ಕಾರಣಕ್ಕೆ ಕೇಂದ್ರ ತಿರಸ್ಕರಿಸಿಲ್ಲ, ಶ್ರೀ ನಾರಾಯಣ ಗುರುಗಳು ಒಬ್ಬ ದಾರ್ಶನಿಕರು ಹಾಗೂ ಅವರ ಆದರ್ಶ ತತ್ವ ಸಿದ್ಧಾಂತಗಳ ಮೇಲೆ ಪ್ರಧಾನಿಯವರಿಗೆ ಮತ್ತು ಬಿಜೆಪಿಗೆ ಅಪಾರ ಗೌರವವಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್ ಅವರು ತಿಳಿಸಿದ್ದಾರೆ.

Advertisement

ಕೇಂದ್ರ ಸರಕಾರವು ಶಂಕರಾಚಾರ್ಯರ ಸ್ತಬ್ಧಚಿತ್ರ ಕಳುಹಿಸಲು ಸೂಚಿಸಿದೆ ಎನ್ನುವುದು ಶುದ್ಧ ಸುಳ್ಳು. ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಜಾತಿಗಳ ಮಧ್ಯೆ ವೈಷಮ್ಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ಷೇಪಿಸಿದ್ದಾರೆ.

ಹಿಂದೆ ಕೇರಳದಲ್ಲಿ ಕಮ್ಯೂನಿಸ್ಟ್ ಪಾರ್ಟಿ ನಾರಾಯಣ ಗುರುಗಳ ಮೂರ್ತಿಯನ್ನು ಭಗ್ನಗೊಳಿಸಿತ್ತೋ ಅವರೇ ಈಗ ಅವರ ರಾಜಕೀಯ ಕಾರಣಕ್ಕಾಗಿ ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯದ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರು ಪೂರ್ಣ ವಿಷಯ ತಿಳಿದು ಹೇಳಿಕೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಮೊದಲೇ ಇದರ ವಿರುದ್ಧ ತಪ್ಪು ಮಾಹಿತಿ ನೀಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲು ಕೇಂದ್ರ ಸರಕಾರವು ಸಮಿತಿ ರಚನೆ ಮಾಡಿ ಅದರ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದರಲ್ಲಿ ಅನವಶ್ಯಕವಾಗಿ ಕೇಂದ್ರ ಸರ್ಕಾರವನ್ನು ಎಳೆದು ತರುವುದು ಸರಿಯಲ್ಲ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next