Advertisement

ಐಟಿ ದಾಳಿಯಿಂದ ಕಾಂಗ್ರೆಸ್‌ ಮುಕ್ತ ದೇಶ ಆಗಲ್ಲ: ಪ್ರಿಯಾಂಕ್‌

12:24 PM Aug 03, 2017 | Team Udayavani |

ಕಲಬುರಗಿ: ಕಾಂಗ್ರೆಸ್‌ಗೆ 125 ವರ್ಷಗಳ ಇತಿಹಾಸವಿದ್ದು, ಇದನ್ನು ಮಣಿಸಲು ಹಾಗೂ ಕೊನೆಗಾಣಿಸಲು ಯಾರಿಂದಲೂ ಸಾಧ್ಯವಿಲ್ಲ. ದಾಳಿ ಮೂಲಕ ಪಕ್ಷವನ್ನು ಕಟ್ಟಿ ಹಾಕಬಹುದು ಎನ್ನುವ ಬಿಜೆಪಿ ಭ್ರಮೆಗೆ ಮುಂದಿನ ದಿನಗಳಲ್ಲಿ ಜನರೇ ಸೂಕ್ತ ಉತ್ತರ ನೀಡುತ್ತಾರೆ ಎಂದು ಪ್ರವಾಸೋದ್ಯಮ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Advertisement

ಸಚಿವ ಡಿ.ಕೆ. ಶಿವಕುಮಾರ ಮನೆ ಮೇಲೆ ದಾಳಿ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ದಾಳಿ ನಡೆಸುತ್ತಿದೆ. ಪ್ರಮುಖವಾಗಿ ಐಟಿ, ಇಡಿ ಹಾಗೂ ಸಿಬಿಐ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಐಟಿ ದಾಳಿ ಮೂಲಕ ಕಾಂಗ್ರೆಸ್‌ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಎನ್ನುವಂತೆ ಈಗ ಬಿಜೆಪಿಯವರು ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದೆ. ಚುನಾವಣೆಯಲ್ಲಿ ಎಲ್ಲ ಆಗು ಹೋಗುಗಳನ್ನು ಅವಲೋಕಿಸಿಯೇ ಜನರು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ. ಮತ್ತೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಐಟಿಯವರಿಗೆ ಎಲ್ಲವೂ ಬಿಟ್ಟು ಈಗ ಈಗಲ್‌ ಟೌನ್‌ ರೆಸಾರ್ಟ್‌ ಏಕೆ ನೆನಪಾಯಿತು? ದಾಳಿ ಪಟ್ಟಿ ಬಿಜೆಪಿ ಕಚೇರಿ ಹಾಗೂ ಕೇಶವ ಕೃಪಾದಲ್ಲಿ ಆಗುತ್ತಿವೆ. ರಾಜ್ಯದಲ್ಲಿ ಈ ಹಿಂದೆ ಆಪರೇಷನ್‌ ಕಮಲ ಮಾಡಿರುವಂತೆ ಈಗ ಗುಜರಾತ್‌ ದಲ್ಲಿ ನಡೆಯುತ್ತಿದೆ ಎಂದು ಟೀಕಿಸಿದರು.

ಪ್ರತಿಭಟನೆ: ಮತ್ತೂಂದೆಡೆ ಐಟಿ ದಾಳಿ ಖಂಡಿಸಿ ಶಾಸಕ ಬಿ.ಆರ್‌. ಪಾಟೀಲ ನೇತೃತ್ವದಲ್ಲಿ ನಗರದ ಸೇಡಂ ರಸ್ತೆಯ ಐಟಿ ಕಚೇರಿ ಎದುರು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next