Advertisement
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜಿಲ್ಲಾ ಬಿಜೆಪಿ ಏರ್ಪಡಿಸಿದ್ದ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯಲ್ಲಿ ಸಾಮರ್ಥಯವಿರುವವರು ಉನ್ನತ ಹುದ್ದೆಗೆ ಏರುತ್ತಾರೆ. ಹಾಗಾಗಿಇ ಬಿಜೆಪಿಯಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದು. ಆದರೇ ಮಕ್ಕಳು ಹಾಗೂ ಮೊಮ್ಮಗನನ್ನು ರಾಜಕಾರಣದಲ್ಲಿ ಬೆಳೆಸುವ ಕುಟುಂಬದ ರಾಜಕಾರಣ ರಾಜ್ಯದಲ್ಲಿ ಒಂದು ಕುಟುಂಬಕ್ಕೆ ಸೀಮಿತವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಮೇಲೆ ಹರಿಹಾಯದರು.
Related Articles
Advertisement
ಜನಧನ ಖಾತೆ: ಬ್ಯಾಂಕ್ ಕಡೆ ಹೆಜ್ಜೆ ಹಾಕದವರಿಗೆಲ್ಲಾ ಜನಧನ ಬ್ಯಾಂಕ್ ಖಾತೆ ಆರಂಭಿಸಿ ಬ್ಯಾಂಕ್ ಕಡೆ ಬರುವಂತೆ ಪ್ರಧಾನಿ ಮೋದಿ ಅವರು ಮಾಡಿದರು. ರಸಗೊಬ್ಬರ ಕಾಳಸಂತೆ ತಪ್ಪಿಸಿದ ಮೋದಿ ಅವರು ಬೇನಾಮಿ ಆಸ್ತಿ ಮಾಡಿಕೊಳ್ಳುವರಿಗೂ ಸಿಂಹಸ್ವಪ್ನವಾದರು. ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿಯೇ ವಂಚನೆ ನಡೆಯುತ್ತಿತ್ತು.
ವಿಜಯಮಲ್ಯ ಸೇರಿದಂತೆ ಹಲವು ಉದ್ಯಮಿಗಳು ಸಾವಿರಾರು ಕೋಟಿಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲ ಪಡೆದು ದೇಶ ಬಿಡುತ್ತಿದ್ದರು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಿದರು. ಹಿಂದೆ ಭ್ರಷ್ಟಾಚಾರ ಎಂದರೆ ಪ್ರಧಾನಿ ಕಾರ್ಯಾಲಯವೇ ಕೇಂದ್ರವಾಗಿರುತ್ತಿತ್ತು. ಈಗ ಸಂಪೂರ್ಣ ಬದಲಾವಣೆಯಾಗಿದೆ. ಸುಧಾರಣೆ ತರಲಾಗಿದೆ ಎಂದು ಕೇಂದ್ರ ಸರ್ಕಾರದ ಜನಪ್ರ ಕಾರ್ಯಕ್ರಮಗಳ ವಿವರ ನೀಡಿದರು.
ಬಿಜೆಪಿಯಿಂದ ಅಭಿವೃದ್ಧಿ: ಕೇಂದ್ರ ಸರ್ಕಾರದ ಅನುದಾನ ಪುರಸಭೆ ಹಾಗೂ ಗ್ರಾಮ ಪಂಚಾಯತಿಗೆ ನೇರವಾಗಿ ಹೋಗುವಂತೆ ಮಾಡಲಾಗಿದೆ. ಹಿಂದಿನ ಯುಪಿಎ ಸರ್ಕಾರ ವೋಟಿ ಗಾಗಿ ಕೆಲಸ ಮಾಡಿದರೇ ಇಂದಿನ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದ ಅವರು, ವಿಶ್ವ ಯೋಗ ದಿನವನ್ನು ಮೋದಿ ಮಾರ್ಗದರ್ಶನದಲ್ಲಿ ಆರಂಭಿಸಿ ಭಾರತ ಸಂಸ್ಕೃತಿಗೆ ಗೌರವ ಸಿಗುವಂತೆ ಮಾಡಿದ ಕೀರ್ತಿ ಎನ್‌ಡಿಎ ಸರ್ಕಾರದ್ದು ಎಂದರು.
ಪ್ರಬುದ್ಧರನ್ನು ಆಯ್ಕೆ ಮಾಡಿ: ಇಷ್ಟೆಲ್ಲಾ ಮಾಡಿರುವ ಮೋದಿ ನೇತೃತ್ವದ ಸರ್ಕಾರ ಇನ್ನು ಮುಂದಿನ ದಿಗಳಲ್ಲಿ ವಸತಿ ರಹಿತರಿಗೆಲ್ಲಾ ಮನೆ ಸಿಗುವಂತೆ ಮಾಡುವ ಗುರಿ ಹೊಂದಿದೆ ಎಂದರು. ಮುಂದಿನ ಚುನಾವಣೆಯಲ್ಲಿ ದೇಶದ ಜನರು ಸಮರ್ಥ ಆಡಳಿತಗಾರರನ್ನು ಆಯ್ಕೆ ಮಾಡಿಕೊಳ್ಳುವ ಪ್ರಬುದ್ಧತೆ ತೋರಬೇಕು ಎಂದು ಮನವಿ ಮಾಡಿದರು.
ಸಂವಾದ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡಿದ್ದ ಸಿ.ಟಿ.ರವಿ ಅವರು ಸಭಿಕರ ಪ್ರಶ್ನೆಗಳಿಗೆ ಉತ್ತರ ನೀಡಿದರು. ಶಾಸಕ ಪ್ರೀತಂ ಜೆ.ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಯೋಗಾರಮೇಶ್, ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ರೇಣುಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವೇಣುಗೋಪಾಲ್ ಕಾರ್ಯಕ್ರಮ ನಿರೂಪಿಸಿದರು.