Advertisement

ಸೋಲಿನ ನೋವು ಮರೆಸಿದ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ

01:27 PM May 17, 2018 | |

ಬಂಗಾರಪೇಟೆ: ರಾಜ್ಯದಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸರ್ಕಾರ ರಚನೆಗೆ ಸಿದ್ಧತೆಗಳು ನಡೆದಿರುವ ಹಿನ್ನೆಲೆಯಲ್ಲಿ ಬಂಗಾರಪೇಟೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪಧಿಸಿದ್ದ ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ ಹಾಗೂ ಎರಡನೇ ಸ್ಥಾನಗಳಿಸಿದ ಜೆಡಿಎಸ್‌ ಅಭ್ಯರ್ಥಿ ಎಂ.ಮಲ್ಲೇಶ್‌ ಬಾಬು ಅವರ ನಡುವೆ ಇನ್ನಿಲ್ಲದ ಅನ್ಯೋನ್ಯತೆ ಕಂಡುಬರುತ್ತಿದೆ.

Advertisement

ಬಂಗಾರಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಿದ್ದು, ಕಾಂಗ್ರೆಸ್‌ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೂ, ಸೋತು ಎರಡನೇ ಸ್ಥಾನ ಪಡೆದಿರುವ ಜೆಡಿಎಸ್‌ನ ಎಂ.ಮಲ್ಲೇಶ್‌ಬಾಬು ಸೋಲಿನ ಯಾವುದೇ ಕಹಿ ಅನುಭವಕ್ಕೆ ಆಸ್ಪದ ಇಲ್ಲದಂತೆ ಶಾಸಕರ ಜತೆ ಆತ್ಮೀಯತೆಯಿಂದಲೇ ಖುಷಿ ಖುಷಿಯಾಗಿರುವುದು ಕಾಣಬರುತ್ತಿದೆ. 

ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ: ಬಂಗಾರ ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಕಾಂಗ್ರೆಸ್‌ನ ಎಸ್‌. ಎನ್‌.ನಾರಾಯಣಸ್ವಾಮಿ 21,400 ಮತಗಳ ಅಂತರದಿಂದ ಜಯಶೀಲ ರಾಗಿದ್ದು, ಜೆಡಿಎಸ್‌ ಅಭ್ಯರ್ಥಿ ಎಂ.ಮಲ್ಲೇಶ್‌ಬಾಬು ಸೋತರೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಕಾಂಗ್ರೆಸ್‌-ಜೆಡಿ ಎಸ್‌ ದೋಸ್ತಿಯಾಗಿಯೇ ಹೋಗಬೇಕಾದ ಅನಿವಾರ್ಯತೆ ಹೆಚ್ಚಾಗಿದೆ. 

ಇವರಿಬ್ಬರನ್ನು ನೋಡಿದಾಗ ಇಬ್ಬರ ಮುಖದಲ್ಲಿ ನಗೆ ಕಾಣಿಸಿಕೊಂಡಿತ್ತು. ಇವರಿಬ್ಬರೂ ಕುಷಲೋಪರಿ ಚರ್ಚೆಯಲ್ಲಿ ಮುಳಗಿ ದ್ದರು. ಪ್ರತಿ ಐದು ವರ್ಷಕ್ಕೊಮ್ಮೆ ಚುನಾವಣೆ ಗಳು ಬರುವುದು ಸಹಜ. ಆದರೆ, ಚುನಾವಣೆಯಲ್ಲಿ ಅಭ್ಯರ್ಥಿಗಳು ಒಬ್ಬರಿಗೊಬ್ಬರು ನಿಷ್ಠುರದಿಂದ ನಡೆದುಕೊಳ್ಳುವ ಅವಶ್ಯಕತೆ ಇಲ್ಲ ಎಂಬುದರ ಬಗ್ಗೆ ಇಬ್ಬರೂ ಅಭ್ಯರ್ಥಿಗಳು
ಚರ್ಚೆ ಮಾಡಿದರು. ಈ ಸನ್ನಿವೇಶ ರಾಜ್ಯದಲ್ಲಿ ದೋಸ್ತಿ ಸರ್ಕಾರ ಬಂದರೆ ಹೀಗೇ ಮುಂದುವರೆಯಲಿದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.

2004ರಲ್ಲಿ ಇದೇ ರೀತಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಕೇವಲ 20 ತಿಂಗಳ ನಡೆದಿತ್ತು. ಆದರೆ, ಆ ಸಂದರ್ಭದಲ್ಲಿ ಬಿಜೆಪಿಯಿಂದ ಬಿ.ಪಿ.ವೆಂಕಟಮುನಿಯಪ್ಪ ಜಯ ಗಳಿಸಿದ್ದರು.
ಕಾಂಗ್ರೆಸ್‌ ಟಿಕೆಟ್‌ ಸಿಗದೇ ಬಂಡಾಯವಾಗಿ ಸ್ಪರ್ಧಿಸಿದ್ದ ಎಂ.ನಾರಾ ಯಣಸ್ವಾಮಿ ಎರಡನೇ ಸ್ಥಾನ ಗಳಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಮಚಂದ್ರಪ್ಪ 3ನೇ ಸ್ಥಾನ ಪಡೆದಿದ್ದರು. ಬಿಜೆಪಿ ಗೆದ್ದಿದ್ದರೂ ಸೋತ ಕಾಂಗ್ರೆಸ್‌ ಪಕ್ಷದವರೇ ತಾಲೂಕಿನಲ್ಲಿ ಆಡಳಿತ ನಡೆಸಿದ್ದನ್ನು ಸ್ಮರಿಸಬಹುದಾಗಿದೆ.

Advertisement

ಜೆಡಿಎಸ್‌ ಪರವಾದ ಅಧಿಕಾರಿಗಳ ನೇಮಕ 
ಸಾಧ್ಯತೆ: ಕಾಂಗ್ರೆಸ್‌-ಜೆಡಿಎಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಗ್ಯಾರಂಟಿ ಎಂದುಕೊಂಡು ಸತತ ಎರಡನೇ ಬಾರಿ ಗೆದ್ದಿರುವ ಹಾಲಿ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿ ಅವರಿಗೆ ಸಡ್ಡು ಹೊಡೆಯಲು ಜೆಡಿಎಸ್‌ ಸಿದ್ಧತೆ ನಡೆ ಸುತ್ತಿರುವ ಬಗ್ಗೆ ಹೇಳಿಕೆಗಳು ಹೊರಬೀಳು ತ್ತಿವೆ. ಜೆಡಿಎಸ್‌ ಪರವಾದ ತಾಲೂಕು ಮಟ್ಟದ ಅಧಿಕಾರಿಗಳನ್ನು ಹಾಕಬೇಕೆನ್ನುವ ಬಗ್ಗೆ ಚರ್ಚೆ ಸಹ ನಡೆಸುತ್ತಿದ್ದಾರೆ ಎನ್ನಲಾಗಿದೆ.

ನಿಗಮ ಮಂಡಳಿ ಅಧ್ಯಕ್ಷ ಸ್ಥಾನ: ಪ್ರಸ್ತುತ ಚುನಾವಣೆಯಲ್ಲಿ ನೆಲೆ ಕಾಣದ ಜೆಡಿಎಸ್‌ ಪಕ್ಷಕ್ಕೆ ಶಕ್ತಿ ತುಂಬಿರುವ ಮಾಜಿ ಶಾಸಕ ಎಂ.ನಾರಾಯಣಸ್ವಾಮಿರಿಗೆ ರಾಜ್ಯದಲ್ಲಿ ಬರುವ ಜೆಡಿಎಸ್‌ -ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ನಿಗಮ
ಮಂಡಳಿ ಅಧ್ಯಕ್ಷ ಸ್ಥಾನ ದೊರೆಯುತ್ತದೆ ಎಂದು ಅವರ ಬೆಂಬಲಿಗರ ಲೆಕ್ಕಾಚಾರ ಹಾಕುತ್ತಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಜೆಡಿಎಸ್‌ ಮುಖಂಡರ ಜತೆ ಆಡಳಿತದಲ್ಲಿ 50:50 ಅನುಪಾತದಲ್ಲಿ ಒಟ್ಟಿಗೇ ಹೋಗುತ್ತೇವೆ. ಜೆಡಿಎಸ್‌
ನವರು ಕಾಂಗ್ರೆಸ್‌ ಪಕ್ಷಕ್ಕೆ ಬದ್ಧ ವೈರಿಗಳಲ್ಲ. ಸರ್ಕಾರದ ನಾಮಿನಿಗಳು ಸೇರಿದಂತೆ ಪ್ರತಿಯೊಂದು ಅಧಿಕಾರ
ಒಟ್ಟೊಟ್ಟಿಗೆ ಹಂಚಿಕೊಂಡು ಅಧಿಕಾರ ನಡೆಸುತ್ತೇವೆ. ನಮ್ಮಿಬ್ಬರಲ್ಲಿ ಯಾವುದೇ ತೊಡಕುಗಳು ಬರದಂತೆ
ಹೈಕಮಾಂಡ್‌ ಸೂಚನೆಯಂತೆ ನಡೆದುಕೊಳ್ಳುತ್ತೇವೆ.
ಕೆ.ಚಂದ್ರಾರೆಡ್ಡಿ, ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್‌ ಸಮಿತಿ

ಬಂಗಾರಪೇಟೆ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ಸ್ಪರ್ಧಿಸಿದ್ದ ನನಗೆ ಮತದಾರರು ಎರಡನೇ ಸ್ಥಾನ ನೀಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎಚ್‌ಡಿಕೆ ಸಿಎಂ ಆದರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲ ವಾಗುತ್ತದೆ. ಚುನಾವಣೆಯಲ್ಲಿ ಸೋತರೂ ಜೆಡಿಎಸ್‌ಗೆ ಅಧಿಕಾರ ಸಿಕ್ಕದಂತಾಗುತ್ತದೆ. ಎಂ.ಮಲ್ಲೇಶ್‌ಬಾಬು, ಜೆಡಿಎಸ್‌ ಪರಾಜಿತ ಅಭ್ಯರ್ಥಿ

ಎಂ.ಸಿ.ಮಂಜುನಾಥ್‌.

Advertisement

Udayavani is now on Telegram. Click here to join our channel and stay updated with the latest news.

Next