ಬೆಂಗಳೂರು: ಐದು ವರ್ಷಗಳ ಸುಗಮ ಸರ್ಕಾರ ನಡೆಸಲು ಕಾಂಗ್ರೆಸ್ ಜೆಡಿಎಸ್ ಹಲವು ಒಪ್ಪಂದ ಮಾಡಿಕೊಂಡಿವೆ. ಆ ಹಿನ್ನೆಲೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ತಿಳಿಸಿದ್ದಾರೆ.
ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದಲ್ಲಿ ಪ್ರಬಲರಾದಂತಾಗಿದೆ.
ಪಂಚ ಸೂತ್ರಗಳ ಒಪ್ಪಂದದ ಆಧಾರದಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿತ. ರಾಜ್ಯದ ಎಲ್ಲಾ ಸ್ಥಳಗಳಲ್ಲೂ ಸಾಮಾಜಿಕ ನ್ಯಾಯ, ಸೌಹಾರ್ದತೆಗೆ ಒತ್ತು ಹೀಗೆ ಹಲವು ಗುರಿಗಳೊಂದಿಗೆ 2 ಪುಟಗಳ ಒಪ್ಪಂದಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಹಿ ಹಾಕಿವೆ.
ಜೆಡಿಎಸ್ ಕಾಂಗ್ರೆಸ್ ಸರ್ಕಾರಕ್ಕೆ ಪಂಚ ಸೂತ್ರ:
1)ಸರ್ಕಾರ ನಡೆಸುವುದಕ್ಕೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ
2)ಸಮ್ಮಿಶ್ರ ಸರ್ಕಾರದ ಆಡಳಿತಕ್ಕೆ ಸಮನ್ವಯ ಸಮಿತಿ ರಚನೆ
3)ಸಮ್ಮಿಶ್ರ ಸಮನ್ವಯ ಸಮಿತಿಗೆ ಇಬ್ಬರು ವಕ್ತಾರರ ನೇಮಕ
4)ನೇಮಕಾತಿ ಬಗ್ಗೆ ಸಮನ್ವಯ ಸಮಿತಿಯಿಂದ ತೀರ್ಮಾನ
5)ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಮೈತ್ರಿ