Advertisement
ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆ ಜತೆಗೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಸಾಧನೆ ಹಾಗೂ ಮುಂದಿನ ಯೋಜನೆಗಳನ್ನೂ ತಿಳಿಸುವ ಕಾಂಗ್ರೆಸ್- ಜೆಡಿಎಸ್ ಜಂಟಿಪ್ರಣಾಳಿಕೆ ಸಿದ್ಧಪಡಿಸಲು ತೀರ್ಮಾನಿಸಿದೆ.
ಪ್ರಮುಖವಾದ ವಿಚಾರಗಳು, ರಾಜ್ಯ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳನ್ನು ಸೇರಿಸಿ ಪ್ರಣಾಳಿಕೆ ರೂಪಿಸಲು
ನಿರ್ಧರಿಸಲಾಗಿದೆ. ಜೆಡಿಎಸ್‌ನ, ಸಹಕಾರ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿನ ಸಾಲ ಮನ್ನಾ, ಬೀದಿ ಬದಿ ವ್ಯಾಪಾರಿಗಳಿಗಾಗಿ ಜಾರಿಗೆ ತಂದಿರುವ ಬಡವರ ಬಂಧು, ಮಹಿಳಾ ಸ್ವ ಸಹಾಯ
ಸಂಘಗಗಳಿಗೆ ಸಬ್ಸಿಡಿ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸ್ವಯಂ ಉದ್ಯೋಗಕ್ಕೆ ಸಾಲ ನೀಡುವ ಯೋಜನೆಗಳು. ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನು
ಪ್ರಸ್ತಾಪಿಸಿ ಮುಂದೆ ರಾಜ್ಯದಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಜತೆಗೆ ಬೆಂಗಳೂರಿನ ನಾಲ್ಕು ಲೋಕಸಭೆ ಕ್ಷೇತ್ರಗಳಿಗೆ ಅದರಲ್ಲೇ ಪ್ರತ್ಯೇಕ ಪ್ರಣಾಳಿಕೆಯೂ ಇರಲಿದೆ ಎನ್ನಲಾಗಿದೆ.
Related Articles
ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.
Advertisement
ಶೀಘ್ರವೇ ವೀಕ್ಷ ಕರ ನೇಮಕನಾಮಪತ್ರ ಪರಿಶೀಲನೆ ಹಾಗೂ ವಾಪಸಾತಿ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎರಡೂ ಪಕ್ಷಗಳಿಂದ ಪ್ರತಿ ಲೋಕಸಭೆ ಕ್ಷೇತ್ರಕ್ಕೆ ವೀಕ್ಷಕರ ನೇಮಕ ಮಾಡಲು ತೀರ್ಮಾನಿಸಲಾಗಿದೆ. ಒಂದೊಂದು ಕ್ಷೇತ್ರಕ್ಕೆ ತಲಾ ಒಬ್ಬೊಬ್ಬರು ಎರಡೂ ಪಕ್ಷಗಳಿಂದ ಇರಲಿದ್ದು, ಸ್ಥಳೀಯವಾಗಿ ಏನೇ ಸಮಸ್ಯೆ ಎದುರಾ ರೂ ಸಮನ್ವಯತೆ ಸಾಧಿಸಲಿದ್ದಾರೆ. ವೀಕ್ಷಕರು ಸರಿಪಡಿಸಲು ಸಾಧ್ಯವಾಗದ ಕ್ಲಿಷ್ಟ ಸಮಸ್ಯೆ ಇದ್ದರೆ ರಾಜ್ಯ ಮಟ್ಟದಲ್ಲಿ ಪರಿಹರಿಸಲು ನಿರ್ಧರಿಸಲಾಗಿದೆ.