Advertisement
ರಾಜ್ಯದ 28 ಕ್ಷೇತ್ರಗಳಲ್ಲಿ ಯಾವ ಪಕ್ಷ ಎಲ್ಲಿ ಗೆಲ್ಲುವ ಸಾಧ್ಯತೆ ಇದೆ ಎನ್ನುವ ಕುರಿತಂತೆ ಎರಡೂ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದು, ಜಂಟಿಯಾಗಿ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಪೂರಕವಾಗುವ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.
Related Articles
Advertisement
ಎರಡು ಕ್ಷೇತ್ರ ತ್ಯಾಗದ ಲೆಕ್ಕ: ಹಾಲಿ ಕ್ಷೇತ್ರಗಳನ್ನು ಬಿಟ್ಟು ಕೊಡಬಾರದು ಎಂದು ರಾಜ್ಯ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದು, ಆದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ದರಾಗಿರಲು ರಾಜ್ಯ ಕಾಂಗ್ರೆಸ್ ನಾಯಕರು ಬಂದಿ¨ªಾರೆ. ಹಾಲಿ ಕಾಂಗ್ರೆಸ್ ಸಂಸದರಿರುವ ಚಿಕ್ಕಬಳ್ಳಾಪುರ ಹಾಗೂ ತುಮಕೂರು ಕ್ಷೇತ್ರಗಳನ್ನು ಜೆಡಿಎಸ್ ಬಯಸಿದ್ದು, ಅನಿವಾರ್ಯವಾದರೆ ಆ ಎರಡೂ ಕ್ಷೇತ್ರಗಳನ್ನು ತ್ಯಾಗ ಮಾಡಲು ಮಾನಸಿಕವಾಗಿ ಸಿದ್ದರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಾರ್ಚ್ 2ರಂದು ಸಮನ್ವಯ ಸಮಿತಿ: ಮಾರ್ಚ್ ಒಂದು ಅಥವಾ ಎರಡನೇ ತಾರೀಖು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿದ್ದು, ಅಂದಿನ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಪಾಲ್ಗೊಳ್ಳುವುದರಿಂದ ಅಲ್ಲೂ ಸೀಟು ಹಂಚಿಕೆ ಕುರಿತು ಚರ್ಚೆ ನಡೆದು ಒಂದು ತೀರ್ಮಾನಕ್ಕೆ ಬರುವ ಸಾಧ್ಯತೆಯಿದೆ.
ಒಂದು ವೇಳೆ, ಸಮನ್ವಯ ಸಮಿತಿ ಸಭೆಯಲ್ಲೂ ಒಮ್ಮತ ಮೂಡದಿದ್ದರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಸಮ್ಮುಖದಲ್ಲಿ ಅಂತಿಮ ಸಭೆ ನಡೆಸಿ, ಮಾರ್ಚ್ 15 ರೊಳಗೆ ಸೀಟು ಹಂಚಿಕೆ ಗೊಂದಲಕ್ಕೆ ತೆರೆ ಎಳೆಯಲು ಎರಡೂ ಪಕ್ಷಗಳ ನಾಯಕರು ಮುಂದಾಗಿದ್ದಾರೆ.
ಉತ್ತಮ ರೀತಿಯಲ್ಲಿ ಚರ್ಚೆಯಾಗಿದೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಕೋಮುವಾದಿ ಶಕ್ತಿಗಳನ್ನು ದೂರ ಇಡುವುದೊಂದೇ ನಮ್ಮ ಉದ್ದೇಶ. ಗೆಲ್ಲುವ ಮಾನದಂಡ ಇಟ್ಟುಕೊಂಡು ಸೀಟು ಹಂಚಿಕೆ ಮಾಡಿಕೊಳ್ಳಲು ತೀರ್ಮಾನಿಸಿದ್ದೇವೆ.– ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ ಅಷ್ಟು ಇಷ್ಟು ಸೀಟು ಎನ್ನುವ ಪ್ರಶ್ನೆ ಇಲ್ಲ. 28 ಕ್ಷೇತ್ರಗಳಲ್ಲಿಯೂ ನಾವು ಗೆಲ್ಲುವುದಷ್ಟೇ ನಮ್ಮ ಗುರಿ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಹಿರಿಯ ನಾಯಕರು ಸೀಟು ಹಂಚಿಕೆ ಅಂತಿಮಗೊಳಿಸುತ್ತಾರೆ
– ಎಚ್.ಡಿ.ರೇವಣ್ಣ, ಲೋಕೋಪಯೋಗಿ ಸಚಿವ. ನಮಗೆ ಸೀಟಿನ ಸಂಖ್ಯೆ ಮುಖ್ಯವಲ್ಲ. ಎರಡೂ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಬೇಕು. ವಿಶಾಲ ದೃಷ್ಟಿಯಲ್ಲಿ ನಾವು ಚರ್ಚೆ ಮಾಡಿದ್ದೇವೆ. ಕನಿಷ್ಠ 25 ಸ್ಥಾನ ಗೆಲ್ಲುವ ವಿಶ್ವಾಸ ಇದೆ. ಇನ್ನೆರಡು ದಿನಗಳಲ್ಲಿ ಸಮನ್ವಯ ಸಮಿತಿ ಸಭೆಯಲ್ಲಿಯೂ ಚರ್ಚಿಸಲಾಗುವುದು.
– ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ. ಬಹಳ ಸೌಹಾರ್ದಯುತವಾದ ಸಭೆ ಯಶಸ್ವಿಯಾಗಿ ನಡೆದಿದೆ. ನಮ್ಮ ಪರಮ ಗುರಿ ಇರುವುದು ಕೋಮುವಾದವನ್ನು ಮಣಿಸುವುದು. ಯಾರಿಗೂ ಪ್ರತಿಷ್ಠೆ ಇಲ್ಲ. ನಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 25 ಸ್ಥಾನ ಗೆಲ್ಲಿಸಲು ರಣ ತಂತ್ರ ರೂಪಿಸುತ್ತೇವೆ.
– ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಾಧ್ಯಕ್ಷ.