Advertisement

ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ

10:38 PM Jan 24, 2021 | Team Udayavani |

ಹನೂರು(ಚಾಮರಾಜನಗರ) : ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ವೇಳೆ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರು ಮೈತ್ರಿ ಧರ್ಮ ಪಾಲನೆ ಮಾಡಿ ಮಾತುಕತೆಯಂತೆ ಆಣೆ ಪ್ರಮಾಣ ಮಾಡಿರುವ ವಿಡಿಯೋವೊಂದು ವೈರಲ್ ಆಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

Advertisement

ತಾಲೂಕಿನ ಕಣ್ಣೂರು ಗ್ರಾಮ ಪಂಚಾಯಿತಿಯಲ್ಲಿ ೧೫ ಸದ್ಯಸ ಬಲವಿದ್ದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ 3 ಪಕ್ಷಗಳ ತಲಾ 5 ಬೆಂಬಲಿತರು ಗೆದ್ದಿದ್ದರು.. ಆದರೆ ಇಲ್ಲಿ ಅಧಿಕಾರ ಹಿಡಿಯಲು ಯಾವುದಾದರೂ 2 ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಅವಶ್ಯಕವಾಗಿತ್ತು. ಈ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಿದ್ಧವಾಗಿ 2 ಪಕ್ಷಗಳ ಸದಸ್ಯರು ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಹೊರಟಿದ್ದರು. ಈ ವೇಳೆ ಕೆಲ ಸದಸ್ಯರು ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯದ ಮುಂಭಾಗ ಕರ್ಪೂರ ಹಚ್ಚಿ ನಾವೆಲ್ಲಾ ಆಡಿದ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಪ್ರಮಾಣ ಮಾಡಿದ್ದಾರೆ.

ಮತ್ತೊಂದು ವಿಡಿಯೋದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಕಣ್ಣೂರು ಬಸವರಾಜಪ್ಪ ಮಾತನಾಡಿ ಮೊದಲ 10 ತಿಂಗಳ ಅವಧಿಗೆ ಬಸವರಾಜು, ಮುಂದಿನ 12 ತಿಂಗಳು ಮಮತಾರಾಣಿ ಮತ್ತು ಉಳಿದ ೮ ತಿಂಗಳಿಗೆ ಶಬಾನ ಖಾನಮ್ ಅವರು ಅಧ್ಯಕ್ಷರಾಗಲಿದ್ದಾರೆ. ಏನೇ ಆದರೂ ನಾವೆಲ್ಲಾ 50-50 ಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ. ಇದೇ ವೇಳೆ ಮತ್ತೊರ್ವ ಮುಖಂಡ ಫೈರೋಜ್ ಮಾತನಾಡಿದ್ದು 5 ವರ್ಷ ಈಗ ಹೇಗಿದ್ದೇವೆ ಹಾಗೆಯೇ ಇರಬೇಕು, ಯಾರಾದರು ಒಬ್ಬರು ಹೆಚು ಕಡಿಮೆ ಮಾಡಿದರೆ ಅವರ ಮನೆ ಮುರಿದುಹೋಗುತ್ತದೆ ಎಂದು ಮಾತನಾಡಿದ್ದಾರೆ.

ಈ 2 ವಿಡಿಯೋಗಳು ಭಾರೀ ಚರ್ಚೆಗೆ ಗ್ರಾಸವಾಗಿದ್ದು ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ, ಅಥವಾ ಚುನಾವಣಾ ಆಯೋಗ ಮಧ್ಯೆ ಪ್ರವೇಶಿಸಿ ಏನಾದರೂ ಕ್ರಮ ಕೈಗೊಳ್ಳಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next