Advertisement

ಕಾಂಗ್ರೆಸ್, ಜೆಡಿಎಸ್ ಕರ್ನಾಟಕವನ್ನು ಎಟಿಎಂ ಆಗಿ ಬಳಸಿಕೊಂಡಿದ್ದವು: ಅನುರಾಗ್ ಠಾಕೂರ್

10:21 PM Mar 12, 2023 | Team Udayavani |

ಕೋಲಾರ: ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ನಾಯಕರಿಗೆ ಹಣ ನೀಡಲು ಕರ್ನಾಟಕವನ್ನು ಎಟಿಎಂ ಆಗಿ ಬಳಸಿಕೊಂಡಿದ್ದವು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಭಾನುವಾರ ಆರೋಪಿಸಿದ್ದಾರೆ.

Advertisement

ಕೋಲಾರದಲ್ಲಿ ನಡೆದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿ’ ಹಿಂದೂಸ್ಥಾ ನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಅನ್ನು ಮುಚ್ಚುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಸುಳ್ಳು ಹಬ್ಬಿಸುತ್ತಿದ್ದಾರೆ.ರಾಜ್ಯ ಘಟಕವು ದೇಶದ ಅತಿದೊಡ್ಡ ಹೆಲಿಕಾಪ್ಟರ್ ಉತ್ಪಾದನಾ ಘಟಕವಾಗಿ ಹೊರಹೊಮ್ಮುವುದನ್ನು ಬಿಜೆಪಿ ಸರ್ಕಾರ ಖಚಿತಪಡಿಸಿದೆ” ಎಂದರು.

ಬಿಜೆಪಿ ನಾಯಕರು ಕೋಲಾರದಲ್ಲಿ ರೋಡ್‌ಶೋ ನಡೆಸಿದರು ಮತ್ತು ಬೆಂಗಳೂರಿನಲ್ಲಿ ಪಕ್ಷದ ಎಸ್‌ಸಿ ಮತ್ತು ಎಸ್‌ಟಿ ಮೋರ್ಚಾಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

”ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರವಿದ್ದಾಗ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ರಾಜ್ಯವನ್ನು ಎಟಿಎಂ ಆಗಿ ಬಳಸಿಕೊಂಡಿದ್ದರು. ಹಣ ಇಲ್ಲಿಂದ ಹೋಗಿದೆ. ಜೆಡಿಎಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ರಾಜ್ಯವು ಒಂದು ಕುಟುಂಬಕ್ಕೆ ಎಟಿಎಂ ಆಗಿ ಮಾರ್ಪಟ್ಟಿದೆ” ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು ವಿದೇಶಿ ನೆಲದಲ್ಲಿ ಭಾರತವನ್ನು ದೂಷಣೆ ಮಾಡಿದ್ದಾರೆ. ಕಾಶ್ಮೀರದ ಒಂದು ಭಾಗವನ್ನು ಪಾಕಿಸ್ಥಾನ ಆಕ್ರಮಿಸಿಕೊಂಡಿರಲು ಕಾರಣ ಇದೇ ಜನರು” ಎಂದು ಠಾಕೂರ್ ಕಿಡಿ ಕಾರಿದರು.

Advertisement

ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಅಭಿವೃದ್ಧಿ ಕಾರ್ಯಗಳಿಗೆ ಹಣ ಸಿಗುವಂತೆ ಮಾಡಿದ್ದರಿಂದ “ಡಬಲ್ ಇಂಜಿನ್” ಸರ್ಕಾರದಿಂದ ಕರ್ನಾಟಕಕ್ಕೆ ಲಾಭವಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳನ್ನು ನಿರ್ಮಿಸಲು 6,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿತ್ತು, ಆದರೆ ಮೋದಿಯವರ ನೇತೃತ್ವದಲ್ಲಿ ಐದು ವರ್ಷಗಳಲ್ಲಿ 50,000 ಕೋಟಿ ರೂ.ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next