Advertisement

ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ, ಗಾಯ

07:50 AM May 07, 2018 | Team Udayavani |

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರ ಗುಂಪುಗಳ ನಡುವೆ ಮಾರಾಮಾರಿ ನಡೆದು ಹಲವರು ಗಾಯಗೊಂಡಿದ್ದಾರೆ.

Advertisement

ನಟ ದರ್ಶನ್‌ ಶನಿವಾರ ಸಿಎಂ ಸಿದ್ದರಾಮಯ್ಯ ಪರ ಪ್ರಚಾರ ನಡೆಸಿದ್ದರು. ದರ್ಶನ್‌ ಗ್ರಾಮಕ್ಕೆ ಬಂದಾಗಲೇ ಜೆಡಿಎಸ್‌ ಕಾರ್ಯಕರ್ತರು ವಿರೋಧಿಸಿದ್ದರು. ಇದೇ ವಿಚಾರವಾಗಿ ಶನಿವಾರ ರಾತ್ರಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿದೆ. ಅಲ್ಲದೆ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಮೇಟಗಳ್ಳಿ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎರಡು ಗುಂಪಿನ ಕಡೆಯವರು ನೀಡಿದ ದೂರು-ಪ್ರತಿ ದೂರು ದಾಖಲಿಸಿಕೊಂಡಿದ್ದಾರೆ. 

ಘರ್ಷಣೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ವಿಷಯ ತಿಳಿದ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ಮಹಿಳೆಯರು ತರಾಟೆಗೆ ತೆಗೆದುಕೊಂಡ‌ರು.

Advertisement

Udayavani is now on Telegram. Click here to join our channel and stay updated with the latest news.

Next