Advertisement

Congress ನಾಳೆ “ಕೈ’ ನಾಯಕರ ರಾಜಭವನ ಚಲೋ; ಸಿಎಂ ಪರವಾಗಿ ಶಕ್ತಿ ಪ್ರದರ್ಶನ

11:53 PM Aug 29, 2024 | Team Udayavani |

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿ ಹಲವರ ವಿಚಾರಣೆಗೆ ಅನುಮತಿ ಕೋರಿ ರಾಜ್ಯಪಾಲರ ಮುಂದೆ ಇರುವ ಎಲ್ಲ ಪ್ರಕರಣಗಳ ಅಭಿಯೋಜನೆಗೆ ಅನುಮತಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ಶನಿವಾರ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಪರ ಇದು ಪಕ್ಷದ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.

Advertisement

ಬೆಳಗ್ಗೆ 10.30ಕ್ಕೆ ವಿಧಾನ ಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಆರಂಭಗೊಂಡು, ರಾಜಭವನದಲ್ಲಿ ಅಂತ್ಯಗೊಳ್ಳಲಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು, ಎಲ್ಲ ಸಚಿವರು, ಕಾಂಗ್ರೆಸ್‌ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ವಿಶೇಷವಾಗಿ ಕೆಲವು ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ನಡೆದು ವಿಚಾರಣೆಗೆ ಅನುಮತಿ ಕೇಳಿದ್ದರೂ ನೀಡಿಲ್ಲ. ಆದರೆ ಪ್ರಾಥಮಿಕ ತನಿಖೆ ನಡೆಯದಿದ್ದರೂ ಸಿಎಂ ವಿರುದ್ಧ ತರಾತುರಿಯಲ್ಲಿ ಅನುಮತಿ ನೀಡಿದ್ದಾರೆ. ಈ ಧೋರಣೆ ಖಂಡ ನೀಯ. ಈ ತಾರತಮ್ಯ ಯಾಕೆ ಎಂದು ಪ್ರಶ್ನಿಸಲಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next