ಹೊಸದಿಲ್ಲಿ: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ನಡೆಯುತ್ತಿದೆ. ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಪಕ್ಷವು ಎರಡು ರಾಜ್ಯಗಳಲ್ಲಿ ಮುನ್ನಡೆಯಲ್ಲಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಂಡಿಯಾ ಕೂಟದ ಮುಂದಿನ ಸಭೆಯನ್ನು ಬುಧವಾರ ಕರೆಯಲಾಗಿದೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಇಂಡಿಯಾ ಮೈತ್ರಿ ಕೂಟದ ಮುಂದಿನ ಸಭೆಯನ್ನು ಬುಧವಾರ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಇದನ್ನೂ ಓದಿ:Cyclone: 24 ಗಂಟೆಗಳಲ್ಲಿ ಆಂಧ್ರ, ತಮಿಳುನಾಡು ಭಾಗಕ್ಕೆ ಅಪ್ಪಳಿಸಲಿದೆ ಮೈಚಾಂಗ್ ಚಂಡಮಾರುತ
ಮತ ಎಣಿಕೆಯು ನಡೆಯುತ್ತಿದ್ದು, ಚತ್ತೀಸ್ ಗಢ್ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಚತ್ತೀಸ್ ಗಢ್ ನಲ್ಲಿ ಅಧಿಕಾರ ಉಳಿಸಿಕೊಳ್ಳಲು ಮತ್ತು ತೆಲಂಗಾಣದಲ್ಲಿ ಹೊಸ ಸರ್ಕಾರ ರಚಿಸಲು ಕಾಂಗ್ರೆಸ್ ಪಾಳಯ ಮುಂದಾಗಿದೆ.
ಇದೇ ವೇಳೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿದೆ. ಅಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮತ್ತೊಂದೆಡೆ ಮಧ್ಯಪ್ರದೇಶದಲ್ಲಿಯೂ ಜನರ ಒಲವು ಬಿಜೆಪಿಯತ್ತ ಇದೆ