Advertisement
ನೇರೆಹಾವಳಿ ಸಂತ್ರಸ್ತರ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಗುರುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.
Related Articles
Advertisement
ರಾಜ್ಯದಲ್ಲಿ ಸಂಭವಿಸಿದ ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕಿತ್ತು ಈ ಮೂಲಕ ಕೇಂದ್ರ ಸರ್ಕಾರದ ವಿಶೇಷ ಅನುದಾನ ರಾಜ್ಯಕ್ಕೆ ದೊರೆಯುತ್ತಿತ್ತು. ಆದರೆ ಸದ್ಯ ಪ್ರತಿ ಜಿಲ್ಲೆಗೆ ಎರಡು ಮೂರು ಕೋಟಿ ಅನುದಾನ ಮಾತ್ರ ಕಲ್ಪಿಸಿದ್ದು, ಕೂಡಲೇ ಸರ್ಕಾರ ಪರಿಹಾರ ಕಲ್ಪಿಸಲು ಮುಂದಾಗಬೇಕು. ಇಲ್ಲವಾದಲ್ಲಿ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುವುದುವುದು ಅನಿವಾರ್ಯವಾಗಲಿದೆ ಎಂದು ಈಶ್ವರ್ ಖಂಡ್ರೆ ಅವರು ಎಚ್ಚರಿಕೆ ನೀಡಿದರು.
ಡಿಕೆಶಿಗೆ ಮಾನಸಿಕ ಕಿರುಕುಳ:ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ಡಿಕೆಶಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ನಗರದ ಜಿಲ್ಲಾಧಿಕಾರಿ ಎದುರಿಗೆ ನಡೆದ ಪ್ರತಿಭಟನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಜತೆಗೆ ಅವರ ಕುಟುಂಬಸ್ಥರಿಗೂ ಸಹ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಆದರೆ, ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ ಎಂದು ಅವರು ಹೇಳಿದರು. ಹುಮನಾಬಾದ ಶಾಸಕ ರಾಜಶೇಖರ ಪಾಟೀಲ ಬಿಜೆಪಿ ಪಕ್ಷಕ್ಕೆ ಸೆರ್ಪಡೆ ಆಗುತ್ತಿದ್ದಾರೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖಂಡ್ರೆ ಅವರು, ‘ರಾಜಶೇಖರ ಪಾಟೀಲ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಲ್ಲಾ ಗಾಳಿ ಸುದ್ದಿ’ ಎಂದು ಸ್ಪಷ್ಟಪಡಿಸಿದ್ದಾರೆ.