Advertisement

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಗೆ ಕೋವಿಡ್-19 ಸೋಂಕು ದೃಢ

12:53 PM Sep 27, 2020 | keerthan |

ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಸೋಂಕು ತಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ.

Advertisement

ಕೋವಿಡ್ ಟೆಸ್ಟ್ ನಲ್ಲಿ ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿಮ್ಮೆಲ್ಲರ ಹಾರೈಕೆಯಿಂದ ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದಿದ್ದಾರೆ.

ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಇನ್ನಿತರರಿಗೆ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಿ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:ರೈತ ಸಂಘಟನೆಗಳಿಂದ ರಾಜ್ಯ ಬಂದ್‌: ಕರಾವಳಿಯಲ್ಲೂ ಬೆಂಬಲ, ಏನಿರುತ್ತೇ- ಏನಿರಲ್ಲ?

ಇಂದು ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ಸಭೆ ನಡೆಯಲಿದ್ದು, ದಿನೇಶ್ ಗುಂಡೂರಾವ್ ಗೈರಾಗುವ ಸಾಧ್ಯತೆಯಿದೆ. ಕಾಂಗ್ರೆಸ್ ನಾಯಕರು ಮಹತ್ವದ ಸಭೆಗೆ ಸೇರಲಿದ್ದು, ಶಾಸಕರು, ಎಂಎಲ್ ಸಿಗಳು, ಮಾಜಿ ಶಾಸಕರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next