Advertisement

ಬಿಎಸ್ ವೈ ಭೇಟಿ ಮಾಡಿದ ಬಳಿಕ ಕಾಂಗ್ರೆಸ್‌ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು ?

12:32 PM Jul 13, 2022 | Team Udayavani |

ಬೆಂಗಳೂರು:  ಬಿಎಸ್ ವೈ ಭೇಟಿಯಲ್ಲಿ ಕುತೂಹಲ ಏನಿಲ್ಲ. ಬೆಂಗಳೂರಿಗೆ ಬಂದಾಗ ಭೇಟಿಯಾಗುತ್ತೇನೆ. ಅವರು ಹಿರಿಯರು,ನಮ್ಮ ಸಮಾಜದ ಮುಖಂಡರು ಇವತ್ತು ಗುರುಪೂರ್ಣಿಮೆ ಬೇರೆ  ಹಿರಿಯರ ಆಶೀರ್ವಾದ ಪಡೆಯೋಣ ಎಂದು ಬಂದೆ ಬೇರೆ ರೀತಿ ಏನೂ ಇಲ್ಲ ಇದೊಂದು ಸೌಹಾರ್ಧಯುತ ಭೇಟಿ ಅವರ ಮಾರ್ಗದರ್ಶನ ಪಡೆದಿದ್ದೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Advertisement

ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್‌ ವೈ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿ, ಅವರು ಹಿರಿಯರು,ನಮ್ಮ ಸಮಾಜದ ಮುಖಂಡರು. ಇವತ್ತು ಗುರುಪೂರ್ಣಿಮೆ ಬೇರೆ  ಹಿರಿಯರ ಆಶೀರ್ವಾದ ಪಡೆಯೋಣ ಎಂದು ಬಂದೆ ಬೇರೆ ರೀತಿ ಏನೂ ಇಲ್ಲ.ಇದೊಂದು ಸೌಹಾರ್ಧಯುತ ಭೇಟಿ ಅವರ ಮಾರ್ಗದರ್ಶನ ಪಡೆದಿದ್ದೇನೆ ಅವರ ಜೊತೆ ರಾಜಕಾರಣದ ಚರ್ಚೆ ಮಾಡಿಲ್ಲ ಅವರಿಗೆ ಗೌರವ ಕೊಡ್ತಾನೇ ಬಂದಿದ್ದೇನೆ ಎಂದರು.

ಇದನ್ನೂ ಓದಿ: ಸೆಟ್ ಟಾಪ್ ಬಾಕ್ಸ್ ಶುಚಿಗೊಳಿಸುವಾಗ ವಿದ್ಯುತ್‌ ಶಾಕ್‌ ಹೊಡೆದು ಗೃಹಿಣಿ ಸಾವು

ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಎಸ್ ವೈ ಗೆ ಪಂಚಮಸಾಲಿ ಸಮುದಾಯಕ್ಕೆ 2-ಎ ಮೀಸಲಾತಿ ಕೊಡಬೇಕು ಎಂಬ ಆಸಕ್ತಿ ಇತ್ತು ಕೆಲವು ಕಾರಣಾಂತರಗಳಿಂದ ಕೊಡಲು ಆಗಲಿಲ್ಲ.  ಬೊಮ್ಮಾಯಿ ಸಾಹೇಬ್ರು ಮೇಲೆ ಭರವಸೆ ಇದೆ. ಎಲ್ಲಾ ಅಡೆತಡೆ ನಿವಾರಣೆ ಮಾಡಿ ಕೊಡ್ತಾರೆ. 2-ಎ ಮೀಸಲಾತಿಯನ್ನು ಕೊಡ್ತಾರೆಂಬ ಭರವಸೆ ಇದೆ ಬೇರೆ ಸಮುದಾಯಕ್ಕೆ ತೊಂದರೆಯಾಗದಂತೆ ನೀಡಬೇಕೆಂದರು.

ಡಿಕೆಶಿ ಉತ್ಸವಕ್ಕೆ ಬೆಂಬಲಿಗರ ಒತ್ತಾಯ ವಿಚಾರಕ್ಕೆ ಸಂಬಂಧಿಸಿ ಮಾತಾನಾಡಿದ ಅವರು, ಅದರ ಬಗ್ಗೆ ನನಗೆ ಗೊತ್ತಿಲ್ಲ ಸಿದ್ದರಾಮಯ್ಯ ಉತ್ಸವ ಮಾಡುತ್ತಾರೆ. ಆ ಕಮಿಟಿಯಲ್ಲಿ ನಾನು ಇದ್ದೇನೆ ಇವತ್ತು ಸಭೆ ಇದೆ,ಭಾಗವಹಿಸುತ್ತೇನೆ. 75ವರ್ಷ ರಾಜಕಾರಣದಲ್ಲಿ ಸೇವೆ ಸಲ್ಲಿಸಿದ್ದಾರೆ. ಮನುಷ್ಯನ ಜೀವನದಲ್ಲಿ ಅದೊಂದು ಸಾರ್ಥಕತೆ. ಅವರು ಉತ್ಸವ ಮಾಡಿ ಎಂದು ಹೇಳಿಲ್ಲ ನಾವೆಲ್ಲ ಸೇರಿ ಮಾಡ್ತಿದ್ದೇವೆ ಎಂದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next