Advertisement
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿಂದ 25 ಸಂಸದರನ್ನು ಗೆಲ್ಲಿಸಿ ಕಳುಹಿಸಿರುವ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಏನೂ ಸಿಕ್ಕಿಲ್ಲ. ಜತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯವನ್ನು ಪ್ರತಿನಿಧಿಸಿದರೂ ತಮ್ಮ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಅನ್ಯ ರಾಜ್ಯಗಳಿಗೆ ನೀಡಿದ್ದಾರೆ. ತಮ್ಮ ಬಜೆಟ್‌ನಲ್ಲಿ 14,780 ಕೋಟಿ ರೂ.ಮಾತ್ರ ನೀಡಿದ್ದಾರೆ. ಆದರೆ, ಸದ್ಯದಲ್ಲೇ ಚುನಾವಣೆ ನಡೆಯುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಆಸ್ಸಾಂ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಕಳೆದ ಲೋಕಸಭಾ ಚುನಾವಣೆ ಯಲ್ಲಿ ಠೇವಣಿ ಕಳೆದುಕೊಂಡ ತಮಿಳುನಾಡಿಗೆ ಹೆಚ್ಚಿನ ಅನುದಾನ ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.
Related Articles
Advertisement
ಇದನ್ನೂ ಓದಿ :ತಲಕಾವೇರಿಯಲ್ಲಿ ಪ್ರವಾಸಿಗರ ಉಪಟಳ ತಡೆಗೆ ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ
ಕೊರೊನಾ ಸಂದರ್ಭದಲ್ಲಿ ದೇಶದಲ್ಲಿ 12.2 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಮೋದಿ ಅವರ 6 ವರ್ಷದ ಅವಧಿಯಲ್ಲಿ 16 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೇಶದಲ್ಲಿ 6.33 ಕೋಟಿ ಸಂಖ್ಯೆಯಷ್ಟಿದ್ದವು. ಸಿಎಂಐಇ ಸಂಸ್ಥೆ ನಡೆಸಿರುವ ಸರ್ವೆ ಪ್ರಕಾರ 1.5 ಕೋಟಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮುಚ್ಚಿ ಹೋಗಿವೆ. ಕೈಗಾರಿಕೆಗಳ ಪುನಶ್ಚೇತನಕ್ಕೆ ಆತ್ಮನಿರ್ಭರ ಭಾರತ ಯೋಜನೆಯಡಿ ಘೋಷಿಸಿದ್ದ ಪ್ಯಾಕೇಜ್ ಎಲ್ಲಿ ಹೋಯಿತು ಎನ್ನುವುದನ್ನು ಜನರ ಮುಂದೆ ಹೇಳಬೇಕು. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು 6 ವರ್ಷಗಳಲ್ಲಿ ಕರ್ನಾಟಕಕ್ಕೆ ಯಾವ ಯೋಜನೆಗಳನ್ನು ತಂದಿಲ್ಲ. ಕೇವಲ ಶೂನ್ಯ ಸಾಧನೆ ಎಂದು ಲೇವಡಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ ಇದ್ದರು.