Advertisement

ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ, ಬೊಮ್ಮಾಯಿ ನಾಲಾಯಕ್ ಸಚಿವ: ಕಾಂಗ್ರೆಸ್ ನಾಯಕ ಮನೋಹರ್

12:42 PM Aug 13, 2020 | keerthan |

ಬೆಂಗಳೂರು: ಕಾವಲ್ ಭೈರಸಂದ್ರ ಗಲಭೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಫಲವಾಗಿದ್ದು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕ ಮನೋಹರ್ ವಾಗ್ದಾಳಿ ನಡೆಸಿದ್ದಾರೆ.

Advertisement

ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಅದರಲ್ಲಿ ಪಾಲ್ಗೊಂಡು ಮನೋಹರ್ ಮಾತನಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಶಾಸಕರಿಗೆ ರಕ್ಷಣೆ ನೀಡದಂತಹ ಪರಿಸ್ಥಿತಿ ಉದ್ಭವಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವುದೇ ಸರ್ಕಾರದ ಸಾಧನೆಯಾಗಿದ್ದು, ಧರ್ಮದ ಹೆಸರಿನಲ್ಲಿ ಕೀಳು ಮಟ್ಟದ ರಾಜಕೀಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಅಖಂಡ ಶ್ರೀನಿವಾಸ್ ನಿವಾಸದ ಮೇಲೆ ದಾಳಿಯಾಗಿದೆ. ರಾಜ್ಯದಲ್ಲಿ ಗೃಹ ಸಚಿವರು ಇದ್ದಾರೆಯೇ, ಇಲ್ವವೋ  ಗೊತ್ತಿಲ್ಲ. ಗುಪ್ತಚರ ಇಲಾಖೆಗೆ ಯಾಕೆ ಈ ವಿಚಾರ ತಿಳಿಯಲಿಲ್ಲ. ಇಡೀ ಗೃಹ ಇಲಾಖೆಯೇ ಸಂಪೂರ್ಣ ವಿಫಲವಾಗಿದೆ. ಬಸವರಾಜ ಬೊಮ್ಮಾಯಿ ಒಬ್ಬ ನಾಲಾಯಕ್ ಸಚಿವ ಎಂದರು.

ನವೀನ್ ಒಬ್ಬ ಬಿಜೆಪಿ ಕಾರ್ಯಕರ್ತ. ಅವನ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನೋಹರ್ ಹೇಳಿದರು. ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next