ಪಟಿಯಾಲ: 34 ವರ್ಷಗಳ ಹಿಂದೆ ರಸ್ತೆಯಲ್ಲಿ ವೃದ್ಧರೊಬ್ಬರಿಗೆ ಹೊಡೆದು ಅವರ ಸಾವಿಗೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಂದು ವರ್ಷ ಜೈಲುಶಿಕ್ಷೆ ಗೆ ಗುರಿಯಾಗಿರುವ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಅವರು ಶುಕ್ರವಾರ ಸಂಜೆ ಪಂಜಾಬ್‌ನ ಪಟಿಯಾಲ ನ್ಯಾಯಾಲಯದಲ್ಲಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಶರಣಾಗಿದ್ದಾರೆ.
ಶರಣಾಗಲು ಎರಡು ವಾರಗಳ ಕಾಲ ಕಾಲಾವಕಾಶ ಕೊಡಬೇಕೆಂದು ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಿದ ಹೊರತಾಗಿಯೂ ಶರಣಾಗಿದ್ದಾರೆ.
ಸಿಧು ಮಾಧ್ಯಮ ಸಲಹೆಗಾರ ಸುರಿಂದರ್ ದಲ್ಲಾ, ಸಿಧು ಅವರು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಶರಣಾಗಿದ್ದಾರೆ. ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಇತರ ಕಾನೂನು ವಿಧಾನಗಳನ್ನು ಅಳವಡಿಸಿಕೊಳ್ಳಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆ ಚುನಾವಣೆ; ನಾಳೆ ಸಿದ್ದರಾಮಯ್ಯ ನವದೆಹಲಿಗೆ :ಹೈಕಮಾಂಡ್ ಜತೆ ಚರ್ಚೆ
ಶರಣಾದ ನಂತರ, ಸಿಧು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಪಟಿಯಾಲಾದ ಮಾತಾ ಕೌಶಲ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಬಳಿಕ ಪಟಿಯಾಲ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ.