Advertisement
ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಗಾಂಧಿ, “ಕೋವಿಡ್ ಸೋಂಕಿನ ಸಣ್ಣ ಪುಟ್ಟ ರೋಗಲಕ್ಷಣಗಳನ್ನು ಅನುಭವಿಸಿದ ನಂತರ, ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಸೋಂಕು ಇರುವುದಾಗಿ ವರದಿ ಬಂದಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ದಯವಿಟ್ಟು ಎಲ್ಲಾ ಸುರಕ್ಷತಾ ಪ್ರೋಟೋಕಾಲ್ ಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ. ಎಂದು ಅವರು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
Related Articles
Advertisement
ತಮ್ಮ ಟ್ವೀಟರ್ ಖಾತೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ವಲಸಿಗರು ಮತ್ತೊಮ್ಮೆ ವಲಸೆ ಹೋಗುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ”. ಆದರೆ ಸರ್ಕಾರವು ಕೋವಿಡ್ ಹರಡಲು ಜನರನ್ನು ದೂಷಿಸುತ್ತಿರುವ ಕೇಂದ್ರ, ಇಂತಹ ಸಾರ್ವಜನಿಕ ನೆರವು ಕ್ರಮವನ್ನು ತೆಗೆದುಕೊಳ್ಳುತ್ತದೆಯೇ?” ಎಂದು ಅವರು ಕೇಳಿದ್ದರು.
ಸದ್ಯ, ಅವರಿಗೆ ಕೋವಿಡ್ ಸೋಂಕು ದೃಢಗೊಂಡಿದ್ದು, ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಓದಿ : ಕೋವಿಡ್ ಸೋಂಕು ಹೆಚ್ಚಳ: ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಿದ ಉತ್ತರಪ್ರದೇಶ ಸರಕಾರ