Advertisement

ಏಮ್ಸ್ ಗೆ ಭೇಟಿ; ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

07:23 PM Oct 14, 2021 | Team Udayavani |

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ(ಅಕ್ಟೋಬರ್ 14) ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದ ಕುರಿತು ವಿಚಾರಿಸಿದ ರಾಹುಲ್ ಗಾಂಧಿ, ಶೀಘ್ರ ಗುಣಮುಖರಾಗಲೆಂದು ಹಾರೈಸಿರುವುದಾಗಿ ವರದಿ ವಿವರಿಸಿದೆ.

ಜ್ವರ ಮತ್ತು ನಿಶ್ಯಕ್ತಿಯ ಹಿನ್ನೆಲೆಯಲ್ಲಿ ಡಾ.ಮನಮೋಹನ್ ಸಿಂಗ್ ಅವರನ್ನು ಬುಧವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಕೂಡಾ ಇಂದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜೀ ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಟ್ವೀಟ್ ಮಾಡಿದ್ದರು.

ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಕೂಡಾ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮನಮೋಹನ್ ಸಿಂಗ್ ಅವರ ಆರೋಗ್ಯದ ಕುರಿತು ವಿಚಾರಿಸಿದ್ದರು. ಅಲ್ಲದೇ ಸಿಂಗ್ ಅವರು ಕೂಡಲೇ ಗುಣಮುಖರಾಗಲಿ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಕೂಡಾ ಪ್ರಾರ್ಥಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next