Advertisement

ರಾಜ್ಯದ ನಾಲ್ವರು ಸಚಿವರಾದರೂ ಲಾಭವಿಲ್ಲ

09:42 PM Jul 09, 2021 | Team Udayavani |

ಬೆಳಗಾವಿ: ಈ ಮೊದಲು ಕೇಂದ್ರ ಸರ್ಕಾರ 50 ಕಿಮೀ ವೇಗದಲ್ಲಿ ಓಡುತ್ತಿತ್ತು. ಆದರೆ ಇನ್ನು ಮುಂದೆ 30 ಕಿಮೀ ಸ್ಪೀಡ್‌ನ‌ಲ್ಲೂ ಓಡುವುದಿಲ್ಲ ಎಂದು ಕೇಂದ್ರ ಸಂಪುಟ ಪುನಾರಚನೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಢರಪುರಗೆ ಹೋಗುವ ರೈಲಿನಲ್ಲಿ ಚಲಿಸುವಾಗಲೇ ಹತ್ತಿ ಇಳಿಯಬಹುದು. ಅದೆ ರೀತಿ ಇನ್ನು ಮುಂದೆ ಕೇಂದ್ರ ಸರ್ಕಾರ ಹೋಗುತ್ತದೆ. ರಾಜ್ಯದಿಂದ ಇನ್ನೂ ನಾಲ್ವರು ಸಂಸದರನ್ನು ಸಚಿವರನ್ನಾಗಿ ಮಾಡಿದರೂ ಯಾವುದೇ ಲಾಭವಾಗುವುದಿಲ್ಲ. ಕೆಲಸ ಮಾಡುವ ಇಚ್ಛಾಶಕ್ತಿ ಪ್ರಧಾನ ಮಂತ್ರಿಗಳಲ್ಲೇ ಇಲ್ಲ. ಟೀಂ ಲೀಡರ್‌ ಇಚ್ಛಾಶಕ್ತಿ ಹೊಂದಿದ್ದರೆ ಮಾತ್ರ ಕೆಲಸ ಸರಿಯಾಗಿ ನಡೆಯುತ್ತದೆ. ಇಲ್ಲದಿದ್ದರೆ ಅವರ ಕೆಳಗಿನವರು ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಪ್ರಧಾನಿಯನ್ನು ಇದುವರೆಗೂ ಕೆಲವು ಭಾಗದ ಮಂತ್ರಿಗಳು ಸರಿಯಾಗಿ ಭೇಟಿಯಾಗಲು ಸಾಧ್ಯವಾಗಿಲ್ಲ. ಸೇನಾಪತಿ (ಪ್ರಧಾನಿ) ಸ್ಥಾನದಲ್ಲಿರುವ ಮೋದಿಯವರೇ ವಿಫಲರಾದಾಗ ಇನ್ನು ಅವರ ಕೆಳಗಿರುವ ಸೈನಿಕರಿಂದ (ಸಚಿವರು) ಏನೂ ನಿರೀಕ್ಷಿಸಲು ಸಾಧ್ಯವಿಲ್ಲ. ಕೋವಿಡ್‌ ನಿರ್ವಹಣೆ ಹಾಗೂ ಲಸಿಕೆ ಹಂಚಿಕೆ ವಿಷಯದಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಸುಪ್ರೀಂ ಕೋರ್ಟ್‌ ಆದೇಶ ಮಾಡದೆ ಹೋಗಿದ್ದರೆ ರಾಜ್ಯಕ್ಕೆ 1000 ಟನ್‌ ಆಕ್ಸಿಜನ್‌ ಸಿಗುತ್ತಿರಲಿಲ್ಲ. ಮೊದಲು ಕೇವಲ 500 ಟನ್‌ ಆಕ್ಸಿಜನ್‌ ನೀಡುತ್ತಿದ್ದರು. ನ್ಯಾಯಾಲಯದ ಆದೇಶದಿಂದ ನಾವು ಹೆಚ್ಚು ಆಕ್ಸಿಜನ್‌ ಪಡೆಯುವಂತಾಯಿತು ಎಂದರು.

ಕೇಂದ್ರ ಸರ್ಕಾರದವರು ಒಮ್ಮೆ ಹೆಚ್ಚು ಲಸಿಕೆ ಪೂರೈಕೆ ಮಾಡುವುದು, ಮತ್ತೂಮ್ಮೆ ಕಡಿಮೆ ನೀಡುವುದು ಮಾಡುತ್ತಿದ್ದಾರೆ. ಹೀಗಾದರೆ ಎಲ್ಲರಿಗೂ ಲಸಿಕೆ ನೀಡಲು ಇನ್ನೂ 2 ವರ್ಷ ಬೇಕಾಗುತ್ತದೆ. ಇನ್ನು ರಾಜ್ಯ ಸರ್ಕಾರ ಸಹ ಕೋವಿಡ್‌ ನಿರ್ವಹಣೆಯಲ್ಲಿ ವಿಫಲವಾಗಿದೆ. ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿಗಳ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಸಚಿವರು ಸರ್ಕಾರವನ್ನು ಸಮರ್ಪಕವಾಗಿ ನಡೆಸಲು ಅಸಮರ್ಥರಾಗಿದ್ದಾರೆ. ಇದನ್ನು ಜನರ ಗಮನಕ್ಕೆ ತರುವ ಕಾರ್ಯವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದರು.

ಶಾಸಕರಾದ ಮಹಾಂತೇಶ ಕೌಜಲಗಿ, ಲಕ್ಷ್ಮೀ ಹೆಬ್ಟಾಳಕರ, ಅಂಜಲಿ ನಿಂಬಾಳ್ಕರ್‌, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮಣ್ಣವರ, ನಗರ ಘಟಕದ ಅಧ್ಯಕ್ಷ ರಾಜು, ಗ್ರಾಮೀಣ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next