Advertisement

ಬಿಜೆಪಿಯವರಿಗೆ ಬಿಎಸ್‌ವೈ ಮೇಲೆ ಪ್ರೀತಿ ಉಳಿದಿಲ್ಲ : ಸತೀಶ ಜಾರಕಿಹೊಳಿ

01:38 PM Oct 13, 2021 | Team Udayavani |

ಬೆಳಗಾವಿ: ಬಿಜೆಪಿಯಲ್ಲಿನ ಈಗಿನ ಬೆಳವಣಿಗೆಗಳನ್ನು ನೋಡಿದರೆ ಮಾಜಿ ಸಿಎಂ ಯಡಿಯೂರಪ್ಪ ವಿರೋಧ ಪಕ್ಷದಲ್ಲಿದ್ದಂತೆ ಕಾಣುತ್ತಿದೆ. ಪಕ್ಷದಲ್ಲಿ ಅವರ ಮೇಲಿನ ಮೊದಲಿನ ಪ್ರೀತಿ ಈಗ ಉಳಿದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾರ್ಮಿಕವಾಗಿ ಹೇಳಿದರು.

Advertisement

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಇದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮುಖ್ಯವಾಗಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಮೇಲೆ ಬಿಜೆಪಿ ಯಲ್ಲಿ ವಿರೋಧ ಪಕ್ಷದವರಂತೆ ಕಾಣಲಾಗುತ್ತಿದೆ. ಬಿಜೆಪಿಯಲ್ಲಿ ಆಂತರಿಕ ಸಮಸ್ಯೆಗಳು ಸಾಕಷ್ಟಿದ್ದು ಕಾಲವೇ ಈ ಬಗ್ಗೆ ಎಲ್ಲವನ್ನೂ ಹೇಳಲಿದೆ ಎಂದರು.

ಹಾನಗಲ್‌ ಹಾಗೂ ಸಿಂದಗಿ ವಿಧಾನಸಭೆ ಉಪಚುನಾವಣೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಹಾನಗಲ್‌ನಲ್ಲಿ ಪಕ್ಷದ ಅಭ್ಯರ್ಥಿಗಳ ನಡುವೆ ಇದ್ದ ಗೊಂದಲ ಬಗೆಹರಿದಿದ್ದು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದಾರೆ ಎಂದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಆಪ್ತರು ಡಿ.ಕೆ ಶಿವಕುಮಾರ ಅವರನ್ನು ಭೇಟಿ ಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರು ಏನು ಸಂದೇಶ ಕೊಟ್ಟಿದ್ದಾರೆ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರೇ ಸ್ಪಷ್ಟ ಉತ್ತರ ಕೊಡಬೇಕು. ನನ್ನ ಬಳಿ ಉತ್ತರ ಇಲ್ಲ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next