Advertisement
ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ನಂತರ ಪದಾಧಿಕಾರಿಗಳಿಗೆ ತಮ್ಮ ಪುತ್ರ ರಾಹುಲ್ ಅವರನ್ನು ಪರಿಚಯಿಸಿದ ಸತೀಶ ಜಾರಕಿಹೊಳಿ ಪಕ್ಷ ಸಂಘಟನೆಯ ಮೂಲಕ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ಪುತ್ರನಿಗೆ ಶುಭ ಹಾರೈಸಿದರು. ಇಂದಿನಿಂದ ಯುವ ಮುಖಂಡರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಈಗ ಅಧಿಕೃತವಾಗಿ ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪಕ್ಷ ಸಂಘಟನೆಯ ಮೂಲಕ ಅವರು ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ಹೇಳಿದರು.
Related Articles
Advertisement
ಕೋವಿಡ್ ಸಂದರ್ಭದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಎಲ್ಲ ಮುಖಂಡರು ಹಾಗೂ ಕಾರ್ಯಕರತರು ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. ಎಲ್ಲರ ಕೆಲಸವೂ ನಮಗೆ ತೃಪ್ತಿ ತಂದಿದೆ. ಮುಂದೆಯೂ ಕೂಡ ಸಮಾಜಕ್ಕೆ ಸೇವೆಯ ಅಗತ್ಯವಿದೆ. ಹೀಗಾಗಿ, ಕಾರ್ಯಕರ್ತರು ಸದಾ ಸನ್ನದ್ಧರಾಗಿರಬೇಕು ಎಂದರು.
ಯುವ ನಾಯಕ ರಾಹುಲ್ ಜಾರಕಿಹೊಳಿ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಸತೀಶ ಶುಗರ್ಸ್ ವತಿಯಿಂದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ವಿತರಿಸುವ ಮೂಲಕ ಅಧಿಕೃತವಾಗಿ ಜಿಲ್ಲಾ ರಾಜಕಾರಣಕ್ಕೆ ಪ್ರವೇಶ ಮಾಡಿದರು. ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಯೂಥ್ ಕಾಂಗ್ರೆಸ್ ಸದಸ್ಯರು ಹರ್ಷ ವ್ಯಕ್ತಪಡಿಸಿ ಅವರನ್ನು ಸ್ವಾಗತಿಸಿದರು.
ಕಳೆದ ಎರಡು ವರ್ಷಗಳಿಂದ ಪ್ರವಾಹ ಹಾಗೂ ಕೋವಿಡ್ ಸಂದರ್ಭದಲ್ಲಿ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ನಿರಂತರವಾಗಿ ಸಮಾಜಸೇವೆ ಮಾಡಿದ್ದಾರೆ. ಈಗ ಅವರು ಅಧಿಕೃತವಾಗಿ ರಾಷ್ಟ್ರೀಯ ಪಕ್ಷಕ್ಕೆ ಪ್ರವೇಶ ಮಾಡಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಆನೆ ಬಲ ಬಂದಾಂತಾಗಿದೆ ಎಂದು ಪಕ್ಷದ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮನ್ನವರ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.