ಶತ್ರುಘ್ನ ಸಿನ್ಹಾ ಕಾಂಗ್ರೆಸ್ ನಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೆತೃತ್ವದ ತೃಣಮೂಲ ಕಾಂಗ್ರೆಸ್ ಗೆ ಸೇರಲು ಸಿದ್ಧರಾಗಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
Advertisement
ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಯಶ್ವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾದ ಕೆಲವೇ ದಿನಗಳಲ್ಲಿ ಮತ್ತೊಬ್ಬ ಹಿರಿಯ ರಾಜಕಾರಣಿ ದೀದಿ ಪಡೆಗೆ ಸೃ್ಪಡೆಯಾಗುತ್ತಿರುವುದು ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
Related Articles
Advertisement
“ಒನ್ ಮ್ಯಾನ್ ಪಾರ್ಟಿ ಮತ್ತು ಟೂ ಮೆನ್ ಆರ್ಮಿ” ಆಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ಅವರು ಬಿಜೆಪಿಯಿಂದ ಹೊರ ಬಂದಿದ್ದರು.
ಇನ್ನು, ಕಳೆದ ವಿಧಾನ ಸಭಾ ಚುನಾವಣೆಯ ಭರ್ಜರಿ ಗೆಲುವಿನ ನಂತರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ, ಅನೇಕ ಹಿರಿಯ ರಾಜಕಾರಣಿಗಳ ಮನವೊಲಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ಮಮತಾ ಬ್ಯಾನರ್ಜಿ ಕಣ್ಣಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟಿದೆ.
ಇದನ್ನೂ ಓದಿ : SSLC ಪರೀಕ್ಷೆಗೆ ಯಾವುದೇ ವಿಘ್ನ ಬರದಂತೆ ನಡೆಸಿ :ಅಧಿಕಾರಿಗಳಿಗೆ ಶಾಸಕಿ ರೂಪಾಲಿ ನಾಯ್ಕ ಸೂಚನೆ