Advertisement

ತೃಣಮೂಲದತ್ತ ವಾಲಿದ ಶತ್ರುಘ್ನ ಸಿನ್ಹಾ.! ಪ್ರಧಾನಿ ಕುರ್ಚಿಯತ್ತ ದೀದಿ ಚಿತ್ತ..?

08:24 PM Jul 16, 2021 | Team Udayavani |

ಕೋಲ್ಕತ್ತಾ : ರಾಷ್ಟ್ರ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ಬೆಳವಣಿಗೆಯಾಗುತ್ತಿದ್ದು, ಎಲ್ಲರ ಕುತೂಹಲಕ್ಕೆ ಕಾರಣವಾಗುತ್ತಿದೆ.
ಶತ್ರುಘ್ನ ಸಿನ್ಹಾ ಕಾಂಗ್ರೆಸ್‌ ನಿಂದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೆತೃತ್ವದ ತೃಣಮೂಲ ಕಾಂಗ್ರೆಸ್‌ ಗೆ ಸೇರಲು ಸಿದ್ಧರಾಗಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.

Advertisement

ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಯಶ್ವಂತ್ ಸಿನ್ಹಾ ತೃಣಮೂಲ ಕಾಂಗ್ರೆಸ್‌ ಗೆ ಸೇರ್ಪಡೆಯಾದ ಕೆಲವೇ ದಿನಗಳಲ್ಲಿ ಮತ್ತೊಬ್ಬ ಹಿರಿಯ ರಾಜಕಾರಣಿ ದೀದಿ ಪಡೆಗೆ ಸೃ್ಪಡೆಯಾಗುತ್ತಿರುವುದು ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : SSLC ಪರೀಕ್ಷೆಗೆ ಯಾವುದೇ ವಿಘ್ನ ಬರದಂತೆ ನಡೆಸಿ :ಅಧಿಕಾರಿಗಳಿಗೆ ಶಾಸಕಿ ರೂಪಾಲಿ ನಾಯ್ಕ ಸೂಚನೆ

ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಶತ್ರುಘ್ನ ಸಿನ್ಹಾ ಅವರು 2019 ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.

ಈಗಾಗಲೇ ಶತ್ರುಘ್ನ ಸಿನ್ಹಾ ಅವರೊಂದಿಗೆ ದೀದಿ ಪಡೆ ಮೊದಲ ಹಂತದ ಮಾತುಕತೆ ಮುಗಿಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೇ, ಜುಲೈ 21 ರಂದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲಕ್ಕೆ ಸೇರಲಿದ್ದಾರೆ ಎನ್ನಲಾಗಿದೆ..

Advertisement

“ಒನ್ ಮ್ಯಾನ್ ಪಾರ್ಟಿ ಮತ್ತು ಟೂ ಮೆನ್ ಆರ್ಮಿ” ಆಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿ ಅವರು ಬಿಜೆಪಿಯಿಂದ ಹೊರ ಬಂದಿದ್ದರು.

ಇನ್ನು, ಕಳೆದ ವಿಧಾನ ಸಭಾ ಚುನಾವಣೆಯ ಭರ್ಜರಿ ಗೆಲುವಿನ ನಂತರ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ, ಅನೇಕ ಹಿರಿಯ ರಾಜಕಾರಣಿಗಳ ಮನವೊಲಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಹುದ್ದೆಗೆ ಮಮತಾ ಬ್ಯಾನರ್ಜಿ ಕಣ್ಣಿಟ್ಟಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟಿದೆ.

ಇದನ್ನೂ ಓದಿ :  SSLC ಪರೀಕ್ಷೆಗೆ ಯಾವುದೇ ವಿಘ್ನ ಬರದಂತೆ ನಡೆಸಿ :ಅಧಿಕಾರಿಗಳಿಗೆ ಶಾಸಕಿ ರೂಪಾಲಿ ನಾಯ್ಕ ಸೂಚನೆ

Advertisement

Udayavani is now on Telegram. Click here to join our channel and stay updated with the latest news.

Next